LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜನವರಿ 24ಕ್ಕೆ ವಿರಾಟ್ ಅಭಿನಯದ `ರಾಯಲ್' ಬಿಡುಗಡೆ

ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿ ಜಯಣ್ಣ ಮತ್ತು ಭೋಗೇಂದ್ರ ಜೊತೆಯಾಗಿ ನಿರ್ಮಿಸಿರುವ, ದಿನಕರ್ ತೂಗುದೀಪ ನಿರ್ದೇಶನದಲ್ಲಿ ವಿರಾಟ್ ಅಭಿನಯಿಸಿರುವ `ರಾಯಲ್' ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರತಂಡದವರು ಮೊದಲ ಪತ್ರಿಕಾಗೋಷ್ಠಿ ಮಾಡಿ, ಚಿತ್ರದ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

`ರಾಯಲ್' ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ ತೂಗುದೀಪ, `ಚಿತ್ರದ ಹಾಡುಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿವೆ. ಚಿತ್ರ ಚೆನ್ನಾಗಿ ಮೂಡಿಬರುವುದಕ್ಕೆ ಕಾರಣ ಕಥೆಗಾರ ರಘು ನಿಡುವಳ್ಳಿ. ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ.ತಂತ್ರಜ್ಞರ ಸಹಕಾರದಿಂದ ಬಹಳ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ನಾನು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದಾರೆ. ಈ ಚಿತ್ರದಿಂದ ದುಡ್ಡು ಮಾಡಬೇಕು ಎನ್ನುವುದಕ್ಕಿಂತ, ಚಿತ್ರರಂಗಕ್ಕೊಬ್ಬ ಒಳ್ಳೆಯ ಹೀರೋ ಕೊಡಬೇಕು ಎಂದು ಸಹಕಾರ ಕೊಟ್ಟರು.

ವಿರಾಟ್ ಎರಡನೆಯ ಸಿನಿಮಾಗೆ ಇಷ್ಟೊಂದು ಖರ್ಚು ಮಾಡಬೇಕಿತ್ತಾ ಎಂದನಿಸಬಹುದು. ಆದರೆ, ವಿರಾಟ್‍ನನ್ನು ಕೊಡುಗೆಯಾಗಿ ಕೊಡಬೇಕು ಎಂಬ ಉದ್ದೇಶದಿಂದ ಚಿತ್ರ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಗೋವಾ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಜನವರಿ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದೇವೆ' ಎಂದು ಮಾಹಿತಿ ನೀಡಿದರು.

ಈ ಹಿಂದೆ `ಕಿಸ್' ಚಿತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪರಿಚಿತರಾದ ವಿರಾಟ್, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. `ಈ ಚಿತ್ರ ಆಗುವುದಕ್ಕೆ ಪ್ರಮುಖ ಕಾರಣ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ. ಅವರ ಬ್ಯಾನರ್ನಲ್ಲಿ ನನಗೆ ಇದು ಎರಡನೆಯ ಸಿನಿಮಾ. ದಿನಕರ್ ಅವರ ನಿರ್ದೇಶನದಲ್ಲಿ ಅಭಿನಯ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರಿಂದ ಸಾಕಷ್ಟು ಕಲಿತಿದ್ದೇನೆ. ಚಿತ್ರ ನಿಜಕ್ಕೂ ರಾಯಲ್ ಆಗಿ ಬಂದಿದೆ. ಚಿತ್ರದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಚಿತ್ರದ ಮೂರು ಹಾಡುಗಳು ಯಶಸ್ವಿಯಾಗಿವೆ' ಎಂದರು.

ಚಿತ್ರದ ನಾಯಕಿಯಾಗಿ ಅಭಿನಯಿಸಿರುವ ಸಂಜನಾ ಮಾತನಾಡಿ, `ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಯಶಸ್ವಿಯಾಗಿವೆ. ದಿನಕರ್ ಅವರ ಚಿತ್ರಗಳನ್ನು ಎಲ್ಲರೂ ನೋಡಿದ್ದಾರೆ. ಇಷ್ಟಪಟ್ಟಿದ್ದಾರೆ. ಅವರ ಚಿತ್ರಜೀವನದಲ್ಲೇ ಇದು ವಿಭಿನ್ನವಾದ ಚಿತ್ರ. ಇನ್ನು, ಇದು ನನ್ನ ಅತ್ಯಂತ ವಿಶೇಷವಾದ ಚಿತ್ರ. ಬಹಳ ಚೆನ್ನಾಗಿ ಮೂಡಿಬಂದಿದೆ. ಚಿತ್ರದಲ್ಲಿ ಹಲವು ಸರ್ಪ್ರೈಸ್‍ಗಳಿವೆ. ಹೊಸ ವರ್ಷಕ್ಕೆ ಒಂದು ವಿಶೇಷ ಚಿತ್ರವಾಗಲಿದೆ' ಎಂದರು.

`ರಾಯಲ್' ಚಿತ್ರದಲ್ಲಿ ವಿರಾಟ್ ಮತ್ತು ಸಂಜನಾ ಆನಂದ್ ಜೊತೆಗೆ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂಕೇತ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ. ಕೆರೆ ಕಲಾ ನಿರ್ದೇಶನ, ರವಿ ವರ್ಮ ಸಾಹಸ ನಿರ್ದೇಶನವಿದೆ. ಪ್ರೇಮ್ ಮತ್ತು ಜಯಂತ್ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು