LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಪಾನ್‍ಗೆ ಇನ್ನು ಭಾರತದಿಂದ ಹಸಿರು ಅಮೋನಿಯಾ ರಫ್ತು ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ | ಹಸಿರು ಹೈಡ್ರೋಜನ್, ಅಮೋನಿಯಾ ಉತ್ಪಾದನೆಯಲ್ಲಿ ಭಾರತ ಜಾಗತಿಕ ನಾಯಕನಾಗುವ ತವಕ: ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್‍ಗೆ ಹಸಿರು ಅಮೋನಿಯಾ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದೆ.ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ, ಜಪಾನ್‍ಗೆ ಇದೇ ಮೊದಲ ಭಾರಿ ಹಸಿರು ಅಮೋನಿಯ ರಫ್ತು ಯೋಜನೆ ಆಫ್‍ಟೇಕ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ವೇಳೆ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಜಪಾನ್ ಗೆ ಹಸಿರು ಅಮೋನಿಯಾ ರಫ್ತು ಮಾಡುವ ಈ ಒಪ್ಪಂದ ಹಸಿರು ಹೈಡ್ರೋಜನ್ ಮತ್ತು ಅಮೋನಿಯಾ ಉತ್ಪಾದನೆಯಲ್ಲಿ ಭಾರತ ಜಾಗತಿಕ ನಾಯಕನಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ಪ್ರತಿಪಾದಿಸಿದರು.
ಭಾರತದಲ್ಲಿ ಹಸಿರು ಅಮೋನಿಯಾ ಉತ್ಪಾದನೆಗೆ ಸೆಂಬ್‍ಕಾರ್ಪ್ ಇಂಡಸ್ಟ್ರೀಸ್ ಮುಂದಾಗಿದ್ದು, ಇದಕ್ಕಾಗಿದೇಶದ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುತ್ತದೆ ಎಂದರು.

ಜಪಾನ್ ತನ್ನ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಬಳಕೆಯನ್ನು ಭಾಗಶಃ ಬದಲಾಯಿಸಿ ಹಸಿರು ಅಮೋನಿಯಾ ಬಳಕೆಗೆ ಮುಂದಾಗಿದ್ದು, ಭಾರತ ಹಸಿರು ಅಮೋನಿಯಾ ಪೂರೈಕೆ ಮಾಡುವ ಮೂಲಕ ಜಪಾನ್ ಈ ಕಾರ್ಯಕ್ಕೆ ಸಾಥ್ ನೀಡಲಿದೆ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಸಿರು ಜಲಜನಕ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದು, ಹಸಿರು ಅಮೋನಿಯಾ ರಫ್ತು ಮಾಡುವ ಜಪಾನ್ ನೊಂದಿಗಿನ ಒಪ್ಪಂದ ನಿದರ್ಶನ ಎಂದು ಹೇಳಿದರು.

7.5 ಲಕ್ಷ ಟಿಪಿಎ ಗೆ ಟೆಂಡರ್: ಪ್ರಸ್ತುತದಲ್ಲಿ ಗ್ರೀನ್ ಅಮೋನಿಯಾದ 7.5 ಲಕ್ಷ ಟಿಪಿಎಗೆ ಟೆಂಡರ್ ಆಗಿದೆ. 4.5 ಲಕ್ಷ ಟಿಪಿಎ ಸಾಮರ್ಥ್ಯಕ್ಕೆ ಹೆಚ್ಚುವರಿ ಟೆಂಡರ್‍ಗಳನ್ನು ಸಹ ನಿರೀಕ್ಷಿಸಲಾಗಿದೆ ಎಂದು ಸಚಿವ ಜೋಶಿ ತಿಳಿಸಿದರು.1 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ: ಭಾರತದಲ್ಲಿ ವಾರ್ಷಿಕ ಒಂದು ಮಿಲಿಯನ್ ಟನ್ಗಳಷ್ಟು ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಹೊಂದಿದ್ದು, ಇದಕ್ಕಾಗಿ ಅಗತ್ಯ   ತ್ಸಾಹ ನೀಡಲಾಗುತ್ತಿದೆ.

ಹಸಿರು ಶಕ್ತಿ ಉತ್ಪಾದನೆಯಲ್ಲಿ ಭಾರತ ತ್ವರಿತ ಮತ್ತು ಅಭೂತಪೂರ್ವ ಸಾಧನೆ ತೋರುತ್ತಿದೆ ಎಂದರು. ಭಾರತ, ಜಪಾನ್ ಮತ್ತು ಸಿಂಗಾಪುರ ಈ ಮೂರು ದೇಶಗಳು ಇಂಧನ ದಕ್ಷತೆ ಮತ್ತು ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳ ಮೇಲೆ ಸಹಯೋಗ ಮಾಡುತ್ತಿವೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು