LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಘೋಷಣೆ ಅಭಿನಯ ಶಾರದೆ ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರೆಯುತ್ತಿದ್ದರು: ಒಡನಾಟ ಸ್ಮರಿಸಿದ ಸಿದ್ದರಾಮಯ್ಯ | ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ: ಬಣ್ಣನೆ

ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ "Lovely But lonely" ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.
ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದರು. ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಬಣ್ಣಿಸಿದರು.

ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ  ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ ಎಂದರು.ಪಿ.ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು.

ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್ , ಹಿರಿಯ ಪತ್ರಕರ್ತ ಸಮೀವುಲ್ಲಾ , ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕರಾದ ಸದಾಶಿವ ಶೆಣೈ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು