LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜರ್ಮನಿ ವಿರುದ್ಧ "ಪ್ಯಾರಿಸ್ ಪ್ರತಿಕಾರ'ಕ್ಕೆ ಸಿದ್ಧತೆ

ಹೊಸದಿಲ್ಲಿ: ಸರಿಯಾಗಿ ಒಂದು ದಶಕದ ಬಳಿಕ ಅಂತಾರಾಷ್ಟ್ರೀಯ ಹಾಕಿ ಹೊಸದಿಲ್ಲಿಗೆ ಮರಳಿದೆ. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ, ವಿಶ್ವ ಚಾಂಪಿಯನ್ ಜರ್ಮನಿಯನ್ನು 2 ಪಂದ್ಯಗಳ ಸರಣಿಯಲ್ಲಿ ಎದುರಿಸಲಿದೆ. ಪಂದ್ಯಗಳು ಬುಧವಾರ ಮತ್ತು ಗುರುವಾರ ನಡೆಯಲಿವೆ.

ಕಳೆದ 10 ವರ್ಷಗಳಿಂದ ರಾಜಧಾನಿಯ ಮೇಜರ್ ಧ್ಯಾನ್‍ಚಂದ್ ನ್ಯಾಶನಲ್ ಸ್ಟೇಡಿಯಂನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯ ನಡೆದಿರಲಿಲ್ಲ. ಇಲ್ಲಿ ಕೊನೆಯ ಪಂದ್ಯ ನಡೆದದ್ದು 2014ರಲ್ಲಿ. ಅದು ಹೀರೋ ವರ್ಲ್ಡ್ ಲೀಗ್ ಫೈನಲ್ ಆಗಿತ್ತು. ಭಾರತ-ಜರ್ಮನಿ ಪಂದ್ಯಗಳಿಗೆ ಉಚಿತ ಪ್ರವೇಶ ನೀಡಲಾಗಿದ್ದು, ಈಗಾಗಲೇ 12 ಸಾವಿರದಷ್ಟು ಮಂದಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ಸೆಮಿಫೈನಲ್‍ನಲ್ಲಿ ಜರ್ಮನಿ 3-2 ಅಂತರದಿಂದ ಭಾರತವನ್ನು ಮಣಿಸಿತ್ತು. ಇದರಿಂದ ಭಾರತದ ಫೈನಲ್ ಓಟಕ್ಕೆ ತಡೆ ಬಿದ್ದಿತ್ತು.
ಅನಂತರ ಚೀನವನ್ನು ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಜಯಿಸಿದ ಹೆಗ್ಗಳಿಕೆ ಭಾರತದ್ದಾಗಿದೆ. ಯುವ ಮತ್ತು ಅನುಭವಿ ಆಟಗಾರರನ್ನು ಒಳಗೊಂಡಿರುವ ಹರ್ಮನ್‍ಪ್ರೀತ ಸಿಂಗ್ ಸಾರಥ್ಯದ ಭಾರತ ತಂಡ ಜರ್ಮನಿ ವಿರುದ್ಧ ತವರಲ್ಲಿ ಜಬರ್ದಸ್ತ್ ಪ್ರದರ್ಶನ ನೀಡೀತು ಎಂಬ ನಿರೀಕ್ಷೆ ಬಲವಾಗಿದೆ. ಇತ್ತಂಡಗಳ ನಡುವಿನ ಕಳೆದ 5 ಪಂದ್ಯಗಳಲ್ಲಿ ಭಾರತ 3 ಜಯ ಸಾಧಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು