LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜಿಂಕೆ ಮಾಂಸ ಸಾಗಾಟ 5 ಮಂದಿ ಬಂಧನ

ಗುಂಡ್ಲುಪೇಟೆ: ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಐದು ಮಂದಿಯನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದ ರವಿ, ಸಿದ್ದಶೆಟ್ಟಿ, ಸಿದ್ದರಾಜು, ಮಹೇಶ ಹಾಗೂ ಪಂಜನಹಳ್ಳಿ ವ್ಯಾಪ್ತಿಯ ಡೋಂಗ್ರಿ ಗೆರೆಷಿಯ ಕಾಲೋನಿಯ ಸುರೇಶ ಬಂಧಿತ ಆರೋಪಿಗಳು.

ಶಿವಪುರ-ಗುಂಡ್ಲುಪೇಟೆ ಮಾರ್ಗದ ಕಲ್ಲುಕಟ್ಟೆ ಡ್ಯಾಂ ಬಳಿ ಮೂರು ಬೈಕ್ ಗಳಲ್ಲಿ ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ಐವರನ್ನು ಅಡ್ಡಗಟ್ಟಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿತರು ಕಡಬೂರು- ಚಿರಕನಹಳ್ಳಿ ಗ್ರಾಮದ ಬಳಿಯ ಕೆರೆಯ ಸಮೀಪ ಜಿಂಕೆಯನ್ನು ಬಂದೂಕಿನಿಂದ ಬೇಟೆಯಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಬಂಧಿತರಿಂದ ಸುಮಾರು 40 ಕೆ.ಜಿ. ಜಿಂಕೆ ಮಾಂಸ, ನಾಡ ಬಂದೂಕು, ಕತ್ತಿ ಮತ್ತು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಗುಂಡ್ಲುಪೇಟೆ ಬಫರ್ ವಲಯದಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಂತರ ಜಿಂಕೆಯ ಮಾಂಸವನ್ನು ನಿಯಮಾನುಸಾರ ವಿಲೇ ಮಾಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ಮಾಹಿತಿ ನೀಡಿದರು.

ಬಂಡೀಪುರ ಹುಲಿಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರಾದ ಶ್ರೀ ಎಸ್ ಪ್ರಭಾಕರನ್, ಭಾ.ಅ.ಸೇ., ರವರ ಮಾರ್ಗದರ್ಶನದಲ್ಲಿ ಶ್ರೀ ಕೆ. ಸುರೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಗುಂಡ್ಲುಪೇಟೆ ಉಪ ವಿಭಾಗ ರವರು ಮುಂದಾಳಾತ್ವ ವಹಿಸಿದ್ದು, ಗುಂಡ್ಲುಪೇಟೆ ಬಫರ್‍ಜೋನ್ ವಲಯದ ವಲಯ ಅರಣ್ಯಾಧಿಕಾರಿಯಾದ ಶ್ರೀ ಕೆ.ಪಿ ಸತೀಶ್‍ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಶ್ರೀ ಶಿವಕುಮಾರ್ ಆರ್, ವಿಶೇಷ ಹುಲಿ ಸಂರಕ್ಷಣಾ ದಳದ ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀ ಕಿರಣ್ ಕುಮಾರ್ ಬಿ.ಎಸ್, ಕಾರ್ತಿಕ್ ಸುರಪುರ್, ಶ್ರೀಪಾಲ್, ರಮೇಶ ಎಸ್ ಮಠಪತಿ, ಶ್ರೀ ಮಹೇಶ ಎನ್ ಹಾಗೂ ಗುಂಡ್ಲುಪೇಟೆ ಬಫರ್ ಜೋನ್ ವಲಯದ ಸಿಬ್ಬಂದಿಗಳು ಮತ್ತು ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು