LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜಿಗಜಿಣಗಿ ಕಿಡಿಕಿಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರ ಹಾಕಿದ ಸಂಸದ

ವಿಜಯಪುರ: ಏಳು ಬಾರಿ ಸಂಸದನಾದರೂ ಸಚಿವ ಸ್ಥಾನ ದೊರೆಯದಿದ್ದಕ್ಕೆ ಬಿಜೆಪಿಯ ಹಿರಿಯ ಸದಸ್ಯ ವಿಜಯಪುರ ಕ್ಷೇತ್ರದ ರಮೇಶ್ ಜಿಗಜಣಗಿ ಪಕ್ಷದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಏಳು ಬಾರಿ ಸಂಸದನಾಗಿ ಗೆದ್ದರು ನನಗೆ ಸಚಿವ ಸ್ಥಾನ ದೊರೆತಿಲ್ಲದಿರುವುದಕ್ಕೆ ಪಕ್ಷದ ಅಭಿಮಾನಿಗಳು ನನ್ನ ಬೆಂಬಲಿಗರು ತೀವ್ರ ಅಸಮಾಧಾನ ಹೊಂದಿದ್ದಾರೆ. ನಾವು ಮೊದಲೇ ಹೇಳಿದ್ವಿ ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಪಕ್ಷಕ್ಕೆ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ವಿಜಯಪುರ ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಹಾಗೂ ಪೂಜೆ ನೆರವೇರಿಸಿ ಮಾತನಾಡಿದ ಅವರು, ನನಗೆ ಮಂತ್ರಿಸ್ಥಾನ ನೀಡುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಅವರು, ನನಗೆ ಅವಶ್ಯಕತೆ ಇರುವುದು ಜನರದ್ದು. ನಾನು ದೆಹಲಿಯಿಂದ ವಿಜಯಪುರಕ್ಕೆ ಮರಳಿದಾಗ ಜನ ನನಗೆ `ಥೂ' ಎಂದು ಬೈದಿದ್ದರು ಎಂದು ತಮಗಾದ ಅನುಭವವನ್ನು ವಿವರಿಸಿದ್ದಾರೆ.

ನನಗೋಸ್ಕರ ಅಲ್ಲದಿದ್ದರೂ ಜನರ ಒತ್ತಡವಂತೂ ಸಚಿವ ಸ್ಥಾನಕ್ಕಿದೆ. ಇದು ಎಂತಹ ನ್ಯಾಯ? ನೀವೇ ಹೇಳಿ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ನಾನೊಬ್ಬನೇ ಗೆದ್ದು ಬಂದೆ. ಎಲ್ಲ ಮೇಲ್ವರ್ಗದ ಜಾತಿಯವರು ಸಚಿವರಾಗಿದ್ದಾರೆ. ದಲಿತರೇನು ಬಿಜೆಪಿಗೆ ಬೆಂಬಲ ನೀಡಿಲ್ಲವೇ ಎಂದು ಜಿಗಜಿಣಗಿ ಪ್ರಶ್ನಿಸಿರುವ ಅವರು, ಈ ವಿಚಾರದಲ್ಲಿ ನನ್ನ ಮನಸ್ಸಿಗೆ ತುಂಬಾ ನೋವಿದೆ ಎಂದಿದ್ದಾರೆ.

ವಾರದ ಹಿಂದಷ್ಟೇ ಅವರು ಬಿಜೆಪಿಯ ಕೆಲವು ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ನಾಯಕರ ಒಳ ರಾಜಕೀಯದಿಂದಾಗಿ ನನಗೆ ಸಚಿವ ಸ್ಥಾನ ತಪ್ಪಿತು ಎಂದು ಹೇಳಿದ್ದರು. ನಾನು ಸಚಿವನಾಗಬೇಕು ಎಂಬುದು ಉತ್ತರ ಕರ್ನಾಟಕದ ಜನರ ಮತ್ತು ನಮ್ಮ ಸಮಾಜದ ಜನರ ಬಯಕೆಯಾಗಿತ್ತು. ರಾಜ್ಯದ ನಾಯಕರು ಸಚಿವ ಸ್ಥಾನಕ್ಕೆ ನನ್ನ ಹೆಸರನ್ನು ಶಿಫಾರಸು ಮಾಡುತ್ತಾರೆ ಎಂಬ ನಂಬಿಕೆ ಇತ್ತು. ಅವರಿಗೆ ಆ ಜವಾಬ್ದಾರಿಯೂ ಇತ್ತು. ಆದರೆ ಯಾರೊಬ್ಬರೂ ನನ್ನ ಪರ ಮಾತನಾಡಲಿಲ್ಲ. ಈ ವಿಷಯದಲ್ಲಿ ರಾಜ್ಯ ನಾಯಕರು ತಪ್ಪು ಮಾಡಿದ್ದಾರೆ ಎಂದು ಅವರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು