LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಿನ್ನೆ ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್‌ ಮಾಡಿಕೊಂಡಿದ್ದು, ಸ್ಪೋಟಕದ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ‌ನಿಷ್ಕ್ರಿಯ ದಳ‌ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು