LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಜಿಲ್ಲಾಡಳಿತದ ವತಿಯಿಂದ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ

ಚಿಕ್ಕಬಳ್ಳಾಪುರ: ಸಮಾಜದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧವಾಗಿ 500 ವರ್ಷಗಳ ಹಿಂದೆಯೇ ಕೀರ್ತನೆಗಳ ರಚನೆಯ ಮೂಲಕ ಜಾಗೃತಿ ಮೂಡಿಸಿದವರು ದಾಸ ಶ್ರೇಷ್ಠ ಶ್ರೀ ಕನಕದಾಸರು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಕುರುಬರ ಸಂಘದ ವತಿಯಿಂದ ಸೋಮವಾರ ನಗರದ ಶ್ರೀ ಗುರುರಾಜ ಕಲ್ಯಾಣ ಮಂಟಪ ಮುಂಭಾಗದಲ್ಲಿ ನಡೆದ ದಾಸಶ್ರೇಷ್ಠ ಶ್ರೀ ಕನಕದಾಸರಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರು ಶ್ರೀಕೃಷ್ಣನ ಪರಮ ಭಕ್ತರಾದ್ದರಿಂದ ಅವರಿಗೂ ಉಡುಪಿಯ ಶ್ರೀಕೃಷ್ಣ ಮಠಕ್ಕೂ ಅವಿನಾಭಾವ ಸಂಬಂಧವಿದೆ.

ಕನಕದಾಸರು ಮೂಲತಃ ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದರು. ಉಡುಪಿ ಶ್ರೀ ಕೃಷ್ಣನ ದೇವಾಸ್ಥಾನದಲ್ಲಿ ವಿಶೇಷವಾಗಿ ಕನಕ ಕಿಂಡಿಯನ್ನು ಈಗಲೂ ಕಾಣಬಹುದು. ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಕೀರ್ತನೆಗಳು, ಆಚಾರ, ವಿಚಾರಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ ಪದ್ಧತಿಯ ವಿರುದ್ದವಾಗಿ ಕೀರ್ತನೆಗಳ ಮೂಲಕ ತಮ್ಮ ನಿಲುವು ಪ್ರದಿಪಾದಿಸಿ ಪರಿವರ್ತನೆ ಹಾಗೂ ಸುಧಾರಣೆಗೆ ಶ್ರಮಿಸಿದವರು ಕನಕದಾಸರು ಎಂದು ತಿಳಿಸಿದರು.

ಶಾಸಕ ಪಿ. ಇ .ಪ್ರದೀಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸಮಾಜದ ಹೆಸರು ಉನ್ನತವಾಗಿ ಬೆಳೆಯ ಬೇಕಾದರೆ ಸಮುದಾಯದ ಮಕ್ಕಳು ಸಾಧಕರಾಗಬೇಕು. ಕನಕನನ್ನು ಕೆಣಕ ಬೇಡ, ಕೆಣಕಿ ತಿಣಕ ಬೇಡ ಎಂದು ದಾಸಶ್ರೇಷ್ಠ ಶ್ರೀ ಕನಕದಾಸರ ಕೀರ್ತನೆಯನ್ನು ಹಾಡಿ ಹೊಗಳಿದರು.

ಶಿಕ್ಷಕ ಬಿ. ಮಂಜುನಾಥ ಅವರು ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನಿಸಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ. ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ತಹಸೀಲ್ದಾರ್ ಅನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ ರವಿ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಎ.ನಾಗರಾಜ್, ತಾಲ್ಲೂಕು ಅಧ್ಯಕ್ಷರಾದ ಎಂ.ಆನಂದ್ ಸಮುದಾಯದ ಪ್ರಮುಖ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು