LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜಿಲ್ಲಾಡಳಿತ ಭವನದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕ್ಯಾನ್ಸರ್-ಭಯ ಬೇಡ, ಜಾಗೃತರಾಗಿರಿ: ಡಾ.ಕೆ.ಎನ್ ಅನುರಾಧ

ಬೆಂ.ಗ್ರಾ ಜಿಲ್ಲೆ: ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಕ್ಯಾನ್ಸರ್ ರೋಗವನ್ನು ತಡೆಯಲು ಸಾರ್ವಜನಿಕರು ಜಾಗೃತರಾಗಿಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಬದಲಾದ ಜೀವನ ಶೈಲಿ, ಮನಸ್ಥಿತಿ, ಆಹಾರ ಪದ್ಧತಿಯಿಂದ ಕ್ಯಾನ್ಸರ್ ನಂತಹ ರೋಗಗಳು ಬರಲಾರಂಭಿಸಿತು. ಕ್ಯಾನ್ಸರ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬರುತ್ತಿದ್ದೆ, ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಜೀವನ ನಡೆಸಿ ಎಂದರು.

ಪ್ರಸಕ್ತ ದಿನಗಳಲ್ಲಿ ಮಹಿಳೆಯರಲ್ಲೂ ಕೂಡ ಹೆಚ್ಚಾಗಿ ಕ್ಯಾನ್ಸರ್ ಕಂಡು ಬರುತ್ತಿದೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಕಂಡು ಬಂದಲ್ಲಿ ಭಯ ಪಡದೆ ಚಿಕಿತ್ಸೆ ಪಡೆಯಬೇಕು. ಮೊದಲ ಹಂತದಲ್ಲೇ ಪತ್ತೆ ಹಚ್ಚಿದ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಮೂಲಕ ಪೂರ್ಣವಾಗಿ ಗುಣ ಪಡಿಸಬಹುದು. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಇಲಾಖೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಸ್ತ್ರೀರೋಗ ಮತ್ತು ಪ್ರಸೂತಿ ತಜರಾದ ಡಾ|| ಸೋನಿಯಾಅವರು ಮಾತನಾಡಿ ಕ್ಯಾನ್ಸರ್ ಬಂದರೆ ಸಾವು ಎಂಬ ಭಾವನೆ ಅನೇಕರಲ್ಲಿದೆ. ಆ ಮನೋಭಾವ ಹೋಗಬೇಕು. ಕ್ಯಾನ್ಸರ್ ರೋಗಿಗಳು ಕೂಡ ಸಾವನ್ನು ಗೆದ್ದು ಎಲ್ಲರಂತೆ ಜೀವನ ನಡೆಸಬಹುದು. ಹಾಗೆ ಕ್ಯಾನ್ಸರ್ ಬಾರದ ಹಾಗೆ ತಡೆಯುವುದು ಕೂಡ ಅತೀ ಮುಖ್ಯ. ಮಹಿಳೆಯರು ಗರ್ಭಕಂಠದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ಲಕ್ಷಣಗಳು ತಿಳಿದ ಕೂಡಲೇ ಆಸ್ಪತ್ರೆಗೆ ಪರೀಕ್ಷಿಸಬೇಕು. ಆದರೇ ಮಹಿಳೆಯರು ಮುಜುಗರ ಪಡುತ್ತಾ ಹಾಗೆ ಉಳಿಯುತ್ತಾರೆ. ಯಾರು ಕೂಡ ಮುಜುಗರ ಪಡದೆ ಪ್ರಥಮ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು. ಕ್ಯಾನ್ಸರ್ ಎಂದರೆ ಜನರು ಭಯ ಪಡುತ್ತಾರೆ. ಇದು ಒಂದು ಗುಣಪಡಿಸಬಹುದಾದ ಖಾಯಿಲೆ. ಸಾರ್ವಜನಿಕರು ಕೂಡ ಆಧುನಿಕ ಜೀವನಶೈಲಿ, ಫಾಸ್ಟ್ ಫುಡ್, ಧೂಮಪಾನ, ಮಧ್ಯಪಾನ ಸೇವನೆಗಳಿಂದ ದೂರವಿರಿ. ನಿಯಮಿತ ಗುಣಮಟ್ಟದ ಆಹಾರ ಸೇವನೆ, ಮನೋ ಶೈಲಿ, ಉತ್ತಮ ಯೋಗಾಭ್ಯಾಸ ಜೀವನದಲ್ಲಿ ರೂಡಿಸಿಕೊಂಡಲ್ಲಿ ರೋಗಗಳು ಮನುಷ್ಯನ ಹತ್ತಿರ ಸುಳಿಯುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುನೀಲ್ ಕುಮಾರ್ ಎಂ. ಸಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಹೇಮಾವತಿ ಎ.ವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಡಾ.ರಾಜೇಶ್ವರಿ, ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು