LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜಿಲ್ಲಾಡಳಿತ ಭವನದಲ್ಲಿ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು: ಜಾಗೃತರಾಗಿರಲು ಜಿಲ್ಲಾಧಿಕಾರಿ ಕರೆ

ಬೆಂ.ಗ್ರಾ.ಜಿಲ್ಲೆ: ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ ಇಂದು ಇಂಟರ್ನೆಟ್ ನ ದಿನನಿತ್ಯದ ಬಳಕೆಯಲ್ಲಿ ಅಪರಿಚಿತರು ನಮ್ಮ ಅಪ್ಲಿಕೇಶನ್‍ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಾರೆ ಮತ್ತು ಬಳಕೆದಾರರ ಹೆಸರು, ಪಾಸ್‍ವರ್ಡ್, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಮುಂತಾದ ನಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡುತ್ತಾ ಬರುತ್ತಿದ್ದಾರೆ, ಹಣ ದುಪ್ಪಟ್ಟು ಮಾಡಿಕೊಳ್ಳಬೇಕೆಂಬ ಆಸೆಯಿಂದ ಅನಗತ್ಯ ಲಿಂಕ್ ಕ್ಲಿಕ್ ಮಾಡಿ ಮೋಸದ ಜಾಲಕ್ಕೆ ತುತ್ತಾಗುವುದು ನಿಲ್ಲಬೇಕು, ಸಾರ್ವಜನಿಕ ಸ್ಥಳದಲ್ಲಿ ಸಿಗುವ ಉಚಿತ ವೈ-ಫೈ ಬಳಕೆ ಮಾಡುವುದನ್ನು ತಪ್ಪಿಸಿ. ವೈಯುಕ್ತಿಕ ಮಾಹಿತಿ ಮತ್ತು ಹಣಕ್ಕಾಗಿ ವಿನಂತಿಸುವ ಅಪರಿಚಿತ ಕರೆಗಳಿಗೆ, ಅಸುರಕ್ಷಿತ ವೆಬ್ಸೈಟ್ ಲಿಂಕ್ ಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ ಎಂದರು.

ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಅವರುಮಾತನಾಡಿ ಸೈಬರ್ ವಂಚಕರು ವಿವಿಧ ರೀತಿಯ ತಂತ್ರಗಳನ್ನು ಬಳಸಿ ಜನರ ನಿದ್ದೆಗೆಡಿಸುತ್ತಿದ್ದಾರೆ, ನಿಮ್ಮಿಂದಲೇ ಒಟಿಪಿ ಪಾಸ್ವರ್ಡ್ ಪಡೆದು ನಿಮಗೆ ವಂಚಿಸುತ್ತಿದ್ದಾರೆ ಹಾಗಾಗಿ ಒಟಿಪಿ, ಆಧಾರ್ ಸಂಖ್ಯೆ, ಪಾನ್ ಅಥವಾ ಬ್ಯಾಂಕ್ ರುಜುವಾತುಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಅಥವಾ ಯಾರೊಂದಿಗೂ ಬಹಿರಂಗ ಪಡಿಸಬೇಡಿ. ನಿಮಗೆ ಸೈಬರ್ ವಂಚನೆಯಾದ ಸಂದರ್ಭದಲ್ಲಿ ಸೈಬರ್ ಕ್ರೈಂ ಪೊಲೀಸ್ ನಂಬರ್ 1930 ಕರೆಮಾಡಿ ದೂರು ದಾಖಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮಾಹಿತಿ ಅಧಿಕಾರಿ ಗೌರಿಶಂಕರ್, ಕೃಷಿ ಇಲಾಖೆ ಉಪನಿರ್ದೇಶಕಿ ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಆಹಾರ ಇಲಾಖೆಯ ಉಪನಿರ್ದೇಶಕರಾದ ಶಂಕರ್ ಮೂರ್ತಿ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು