LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಜಿಲ್ಲಾಧಿಕಾರಿಗಳಿಂದ ರೇಷ್ಮೆ ಸೀರೆ ಅನಾವರಣ ಮೂಲಕ ಮತದಾನ ಜಾಗೃತಿ

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ ನಗರದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ‘ಚುನಾವಣಾ ಪರ್ವ-ದೇಶದ ಗರ್ವ’ ಘೋಷವಾಕ್ಯವುಳ್ಳ ವಿವಿಧ ವರ್ಣಗಳಿಂದ ಕೂಡಿದ ರೇಷ್ಮೆ ಸೀರೆಗಳನ್ನು ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ನಗರದ ಜಿಲ್ಲಾಡಳಿತ ಭವನದ ಒಳಾವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೈಮಗ್ಗ ನೇಕಾರರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ‘ಚುನಾವಣಾ ಪರ್ವ-ದೇಶದ ಗರ್ವ’ ಘೋಷವಾಕ್ಯಗಳನ್ನು ಮುದ್ರಿಸಿರುವ ಬಣ್ಣಬಣ್ಣದ ರೇಷ್ಮೆ ಸೀರೆಗಳನ್ನು ಪ್ರದರ್ಶಿಸಿ ವಿಭಿನ್ನವಾದ ಮತದಾನದ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ ಅವರು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕುರಿತ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ.

ಅದರ ಭಾಗವಾಗಿ ಚುನಾವಣಾ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕೆಂಬುದೇ ಜಾಗೃತಿ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.ಈ ಬಾರಿಯ ಚುನಾವಣೆಯಲ್ಲಿ ಮತದಾನ ದಿನವಾದ ಏಪ್ರಿಲ್ 26ರಂದು ಚುನಾವಣಾ ನಿರತ ಎಲ್ಲಾ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು ಕೊಳ್ಳೇಗಾಲದ ಕೈಮಗ್ಗ ನೇಕಾರರು ವಿಶೇಷವಾಗಿ ವಿನ್ಯಾಸಗೊಳಿಸಿ ‘ಚುನಾವಣಾ ಪರ್ವ-ದೇಶದ ಗರ್ವ’ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಇದು ಸಹಕಾರಿಯಾಗಲಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ತಿಳಿಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಜಿಲ್ಲಾಧಿಕಾರಿಯ ಕಚೇರಿಯ ಚುನಾವಣಾ ತಹಶೀಲ್ದಾರ್ ಕೀರ್ತನಾ, ಇತರರು ಇದೇ ವೇಳೆ ಇದ್ದರು.ಕಾರ್ಯಕ್ರಮದ ಬಳಿಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಸೇರಿದಂತೆ ಇತರೆ ಗಣ್ಯರು ಸಖೀ ಸೌರಭದ ಬ್ಯಾನರ್‍ನಡಿ ನಿಂತು ‘ಚುನಾವಣಾ ಪರ್ವ ದೇಶದ ಗರ್ವ’ ಮತದಾನದ ಘೋಷವಾಕ್ಯ ಮೊಳಗಿಸಿ ಮತದಾನದ ಅರಿವು ಮೂಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು