LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜಿಲ್ಲಾ ಮಟ್ಟದ ಸಮನ್ವಯ ಸಭೆ

ದಾವಣಗೆರೆ: ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವುದರಿಂದ ಎರಡು ಇಲಾಖೆಗೂ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದರು.

ಅವರು ಶನಿವಾರ (29) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆ ವತಿಯಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಪಡೆಯುವ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂಗನವಾಡಿಯಲ್ಲಿ ದಾಖಲಾಗಿರುವ ಮಕ್ಕಳು 6 ವರ್ಷದ ನಂತರ ನೇರವಾಗಿ ಶಾಲೆಗೆ ಪ್ರವೇಶ ಪಡೆಯುವುದರಿಂದ ಸ್ಥಳಾವಕಾಶವಿರುವಂತಹ ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಿದರೆ ಎರಡೂ ಇಲಾಖೆಗಳಿಗೂ ಅನುಕೂಲವಾಗುತ್ತದೆ. ಅಕ್ಕ ಪಕ್ಕದ ಮನೆಯಿಂದ ಶಾಲೆಗೆ ಹೋಗುವ ಮಕ್ಕಳ ಜೊತೆ ಅಂಗನವಾಡಿಗೆ ಬರುವ ಮಕ್ಕಳಿಗೂ ಸಹಕಾರಿಯಾಗುತ್ತದೆ. ಇದರಿಂದ ಯಾವುದೇ ಮಗು ಶಾಲೆಗೆ ದಾಖಲಾಗದೇ ಹೊರಗುಳಿಯುವುದನ್ನು ತಪ್ಪಿಸಬಹುದಾಗಿದೆ. ನಿರಂತರ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.

ಶಾಲೆಯ ಆವರಣದಲ್ಲಿಯೇ ಅಂಗನವಾಡಿ ಮಕ್ಕಳು 3 ವರ್ಷಗಳ ಕಾಲ ಇರುವುದರಿಂದ ಶಾಲೆಗೆ ಸೇರಿದಾಗ ಶಾಲೆಯ ಭಯವಿಲ್ಲದೆ ಮಕ್ಕಳು ಬರಲು ಅಭ್ಯಾಸವಾಗುತ್ತದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಸ್ಥಳಾವಕಾಶ ಇದ್ದಲ್ಲಿ ಕಟ್ಟಡ ಕಟ್ಟಲು ಸಂಪೂರ್ಣ ಸಹಕಾರ ನೀಡಲು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ಪ್ರಸ್ತುತ ನಗರ ಪ್ರದೇಶದಲ್ಲಿ 195 ಮತ್ತು ಗ್ರಾಮೀಣ ಪ್ರದೇಶದಲ್ಲಿ 224 ಕಟ್ಟಡಗಳ ಅವಶ್ಯಕತೆ ಇದೆ. ಹೊಸವಾಗಿ ರಿಮೋಟ್ ಸೆನ್ಸಿಂಗ್ ತಂತ್ರಾಂಶದ ಮೂಲಕ ನಗರ ಪ್ರದೇಶದಲ್ಲಿ 104, ಗ್ರಾಮೀಣ ಪ್ರದೇಶದಲ್ಲಿ 19. ಒಟ್ಟು 123 ನಿವೇಶನಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗುರುತಿಸಿರುತ್ತಾರೆ. ಸದರಿ 123 ನಿವೇಶನಗಳನ್ನು ಒಂದು ವಾರದ ಒಳಗಾಗಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಸದರಿ ನಿವೇಶನಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಸ್ತಾಂತರಿಸಲು ತಿಳಿಸಿದರು.

ಶಾಲಾ ಆವರಣದಲ್ಲಿ ನಿವೇಶನ ಲಭ್ಯತೆ ಇದ್ದಲ್ಲಿ ನಿವೇಶನ ನೀಡಲು ಮತ್ತು ಶಾಲಾ ಕಟ್ಟಡಗಳಲ್ಲೇ ಅಂಗನವಾಡಿ ಕಟ್ಟಡಗಳು ನಡೆಯುತ್ತಿದ್ದರೆ, ಅದೇ ಕೊಠಡಿಯಲ್ಲಿ ಅಂಗನವಾಡಿಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಕಟ್ಟಡ ನಿರ್ಮಾಣ ಮಾಡಲು ಸಂಪೂರ್ಣ ಸಹಕಾರ ನೀಡಲು ಶಿಕ್ಷಣ ಇಲಾಖೆಯು ಸಹಕರಿಸಬೇಕಾಗಿ ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳ ನಿರ್ಮಾಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿ 1771 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 1160 ಸ್ವಂತ ಕಟ್ಟಡಗಳಲ್ಲಿ ನಡೆಯುತ್ತಿವೆ. 399 ಅಂಗನವಾಡಿಗಳು ಬಾಡಿಗೆ ಕಟ್ಟಡ ಮತ್ತು 109 ಶಾಲೆ, 103 ಸಮುದಾಯ ಹಾಗೂ ಇತರೆ ಕಟ್ಟಡಗಳಲ್ಲಿ ನಡೆಯುತ್ತಿವೆ ಎಂದು ತಿಳಿಸಿದರು.ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಕೋಟ್ರೇಶ್. ಜಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು