LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೀಪ್ ಟಯರ್ ಸ್ಫೋಟ ಪೊಲೀಸ್ ಅಧಿಕಾರಿ ಸಾವು

ಬೆಂಗಳೂರು : ಟಯರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ ಜೀಪ್ ಪಲ್ಟಿಯಾಗಿ ತರಬೇತಿ ನಿರತ ( ಪ್ರೊಬೆಷನರಿ) ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ದನ್ ಎಂದು ಗುರುತಿಸಲಾಗಿದೆ. ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ಹರ್ಷಬರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು.ಭಾನುವಾರ ಸಂಜೆ ಐಜಿಪಿ ಅವರನ್ನು ಭೇಟಿ ಮಾಡಿ ವರದಿ ಮಾಡಿಕೊಳ್ಳಲು ಹೊಳೆನರಸೀಪುರ ಕಡೆಯಿಂದ ಜೀಪ್‍ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‍ನ ಟಯರ್ ಸ್ಫೋಟಗೊಂಡಿದೆ.

ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ.

ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು