LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೀವಮಾನ ಸಾಧನೆ ಪ್ರಶಸ್ತಿಗೆ ಡಾ.ಪ್ರಕಾಶ್‍ನಾಥ ಸ್ವಾಮಿ, ಎಚ್.ಎನ್.ಪ್ರಶಸ್ತಿಗೆ ಜೆ.ಸ್ವಾಮಿ ರೆಡ್ಡಿ ಆಯ್ಕೆ: ಬಿ.ಜಿ. ಜಗದೀಶ್

ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ ಹೆಚ್‍ಎನ್ ಪ್ರಶಸ್ತಿ 2024 ಅನ್ನು ಜೆ ಸ್ವಾಮಿ ರೆಡ್ಡಿ ಅವರಿಗೆ ಹಾಗೂ ಮಹಿಳಾ ಸಾಧಕರಿಗೆ ರಾಜ್ಯಮಟ್ಟದ ಚೈತನ್ಯಶ್ರೀ ಪ್ರಶಸ್ತಿ 2024 ಅನ್ನು ಆರತಿ ಚೌದರಿ ರವರಿಗೆ ನೀಡಿ ಪುರಸ್ಕರಿಸಲಾಗುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಪಿಜಿ ಜಗದೀಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ವತಿಯಿಂದ ಇದೇ ತಿಂಗಳು 28 ಮತ್ತು 29 ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮಾಜಿ ಸಚಿವೆ ಹಾಗೂ ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀಯವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
ಯಲಹಂಕ ತಾಲ್ಲೂಕಿನ ಬಾಗಲೂರು ವಿ.ಜೆ. ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿಶ್ವ ಮಾನವ ಕುವೆಂಪು ದಿನಾಚರಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಸಹಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ಕರ್ನಾಟಕ ರಾಜ್ಯ ಖಾಸಗಿ ಶಾಲೆ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಬೆಂಗಳೂರು ಭವಿಷ್ಯದಲ್ಲಿ ವೈಜ್ಞಾನಿಕ ಚಿಂತನೆಯನ್ನು ಮೂಡಿಸುವುದು ಹಾಗೂ ಕಂದಾಚಾರ ವೈಚಾರಿಕ ಪ್ರಜ್ಞೆಗಳನ್ನು ಮುಂದಿನ ಪೀಳಿಗೆಗೆ ಕೊಂಡಯುವುದೇ ಈ ಪರಿಷತ್ತಿನ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.ಎರಡು ದಿನದ ಸಮ್ಮೇಳನದಲ್ಲಿ ವೈಜ್ಞಾನಿಕ ಪರಿಷತ್ತಿನ ಉಪಾಧ್ಯಕ್ಷರಾದ ಬಿ.ಜಿ. ಅವಟಿ, ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಜಿ.ರಾವ್ ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿರುವರು ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು