LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.

ಸಿಪಿ ಯೋಗೇಶ್ವರ್ ಅವರು ನಿಖಿಲ್ ಕುಮಾರಸ್ವಾಮಿ ವಿರುದ್ಧ 25,413 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ, ನಟ-ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು 87,229 ಮತಗಳನ್ನು ಪಡೆದರೆ, ಯೋಗೀಶ್ವರ ಅವರು 1,12,642 ಮತಗಳನ್ನು ಪಡೆದಿದ್ದಾರೆ.

ಈ ಭಾಗದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಯೋಗೀಶ್ವರ್ ಅವರು, ನಟ-ರಾಜಕಾರಣಿಯೂ ಆಗಿದ್ದು, ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು.

ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಕುಮಾರಸ್ವಾಮಿಯನ್ನು ಬಲಿಕೊಟ್ಟಿದ್ದಾರೆ ಎಂದು ಎಂದರು.

ಕುಮಾರಸ್ವಾಮಿ ಮನಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಈಗ ಮಗನನ್ನು ಬಲಿಕೊಟ್ಟರು ಎಂದು ಯೋಗೇಶ್ವರ್ ಟೀಕಿಸಿದರು.

ನಿಖಿಲ್ ಕುಮಾರಸ್ವಾಮಿ ,ಸೋಲಿನ ಮೂಲಕ ಜೆಡಿಎಸ್​​ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದರು.

ದೇವೇಗೌಡರು ದೈತ್ಯ ಶಕ್ತಿ ಎಂದು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಅದು ಸತ್ಯ. ಆದರೆ, ಅವರಿಗೆ ವಯಸ್ಸಾಗಿದೆ. ಈ ಕಾರಣದಿಂದ ಅವರನ್ನು ಜನ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಈಗ ಅವರು ವಿಶ್ರಾಂತ ಜೀವನ ನಡೆಸಲು ಸೂಕ್ತ ಕಾಲ ಎಂದರು.

ನಾನು ಹಿಂದೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಡಾ. ಮಂಜುನಾಥ್ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿಕೆ ಸುರೇಶ್​ಗೆ ಸೋಲಾಗಿತ್ತು. ಆದರೆ, ಈ ಚುನಾವಣೆಯಲ್ಲಿ ಅದೇ ಡಿಕೆ ಸುರೇಶ್ ಹೆಗಲಿಗೆ ಹೆಗಲು ಕೊಟ್ಟು ನನ್ನನ್ನು ಗೆಲ್ಲಿಸಿದ್ದಾರೆ. ಡಿಕೆ ಸಹೋದರರ ಸಹಕಾರಕ್ಕೆ ಧನ್ಯವಾದ ಎಂದು ಯೋಗೇಶ್ವರ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು