LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜೋಗ್ ಫಾಲ್ಸ್ ಬಳಿ ರೋಪ್ ವೇ ಮತ್ತು ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಜೋಗ ಜಲಪಾತದ ಬಳಿ ರೋಪ್ ವೇ ಹಾಗೂ ಪಂಚತಾರಾ ಹೋಟೆಲ್ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.

ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ ಯೋಜನೆಗೆ ಅಗತ್ಯವಿದ್ದು, ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ಗಾಗಿ ರಾಜ್ಯ ಸರ್ಕಾರ ಕಾದು ಕುಳಿತಿದೆ.

ಪ್ರವಾಸೋದ್ಯಮ ಇಲಾಖೆ ಮತ್ತು ಜೋಗ ಅಭಿವೃದ್ಧಿ ಪ್ರಾಧಿಕಾರ (ಜೆಎಂಎ) ಜಲಪಾತದ ಬಳಿಯ ಬಂಗಲೆಗಳ ಕೆಡವಿ ಪಂಚತಾರಾ ಹೋಟೆಲ್ ನಿರ್ಮಿಸುತ್ತಿದ್ದು, 1 ಕಿ.ಮೀ ಉದ್ದದ ರೋಪ್ ವೇ ಕೂಡ ನಿರ್ಮಿಸಲು ಮುಂದಾಗಿದೆ. ಇದಕ್ಕಾಗಿ ಅರಣ್ಯ ಇಲಾಖೆಯು 2.39 ಹೆಕ್ಟೇರ್ ಭೂಮಿ ಹಸ್ತಾಂತರಿಸಬೇಕಿದ್ದು, ಈ ಪೈಕಿ 1.89 ಹೆಕ್ಟೇರ್ ಭೂಮಿ ಸಾಗರ ವಿಭಾಗದಲ್ಲಿದೆ. ಅಂದುಕೊಂಡಂತೆ ಆದರೆ, ಕರ್ನಾಟಕದ ಮೊದಲ ರೋಪ್ ವೇ ಯೋಜನೆಯು 2025ರ ಜುಲೈ ವೇಳೆಗೆ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಜೆಎಂಎ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ನಡುವೆ ಯೋಜನೆಗೆ ಕೆಲ ಅರಣ್ಯ ಅಧಿಕಾರಿಗಳು ಹಾಗೂ ತಜ್ಞರು ವಿರೋಧ ವ್ಯಕ್ತಪಡಿಸಿದ್ದು, ಯೋಜನೆಯು ಅಳಿವಿನಂಚಿನಲ್ಲಿರುವ ಸಿಂಹ ಬಾಲದ ಸಿಂಗಳಿಕಗಳ (LTM) ಆವಾಸ್ಥಾನವನ್ನು ನಾಶಪಡಿಸುತ್ತದೆ ಎಂದು ಹೇಳಿದ್ದಾರೆ,

ಒಂದೆಡೆ ಸಚಿವ ಈಶ್ವರ್ ಖಂಡ್ರೆ ಅವರು ಒತ್ತುವರಿ ಮಾಡಿಕೊಂಡಿರುವ ಅರಣ್ಯ ಭೂಮಿಯನ್ನು ವಾಪಸ್ ಪಡೆಯಲು ಹೋರಾಟ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಖಂಡ್ರೆ ಇಬ್ಬರೂ ಅರಣ್ಯ ಪ್ರದೇಶವನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ್ದಾರೆ, ಆದರೆ, ಪ್ರವಾಸೋದ್ಯಮ ಯೋಜನೆಗಳಿಗಾಗಿ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಇದು ಭವಿಷ್ಯದಲ್ಲಿ ಅರಣ್ಯ ಭೂಮಿ ಕಡಿಮೆಯಾಗಲು ಕಾರಣವಾಗುತ್ತದೆ ಎಂದು ತಜ್ಞರೊಬ್ಬರು ಹೇಳಿದ್ದಾರೆ.

ರೋಪ್ ವೇ ನಿರ್ಮಾಣಕ್ಕೆ ಉದ್ದೇಶಿರುವ ಭೂ ಪ್ರದೇಶವು LTM ಅಭಯಾರಣ್ಯದಿಂದ 4.3ಕಿ.ಮೀ ದೂರದಲ್ಲಿದೆ ಯೋಜನೆಗಳನ್ನು ಎರಡು ಹಂತಗಳಲ್ಲಿ ಕಾರ್ಯಗತಗೊಳಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 183 ಕೋಟಿ ರೂಪಾಯಿ ವೆಚ್ಚದಲ್ಲಿ ಜೋಗ್ ಫಾಲ್ಸ್ ಪ್ರದೇಶದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಗುತ್ತಿಗೆದಾರರಿಗೆ 42 ವರ್ಷಗಳ ಗುತ್ತಿಗೆ ಅವಧಿಯನ್ನು ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ, ಪಿಪಿಪಿ ಅಡಿಯಲ್ಲಿ 116 ಕೋಟಿ ರೂಪಾಯಿ ವೆಚ್ಚದಲ್ಲಿ ಪಂಚತಾರಾ ಹೋಟೆಲ್ ಮತ್ತು ರೋಪ್‌ವೇ ನಿರ್ಮಾಣ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಅನುಮತಿ ದೊರೆತ ನಂತರ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದು ಜೆಎಂಎ ಪ್ರವಾಸೋದ್ಯಮ ಹೆಚ್ಚುವರಿ ನಿರ್ದೇಶಕ ಧರ್ಮಪ್ಪ ಟಿ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಅರಣ್ಯ ಭೂಮಿಯನ್ನು ಇಲಾಖೆಗೆ ತಿಳಿಯದಂತೆ ಹಲವು ವರ್ಷಗಳಿಂದ ಬಳಸಿಕೊಳ್ಳಲಾಗಿದೆ. ಸರ್ಕಾರ ಸಮೀಕ್ಷೆ ನಡೆಸಿಲ್ಲ. ಸಮೀಕ್ಷೆ ನಡೆಸಿದಾಗ ಯೋಜನೆ ಕಾರ್ಯಗತಗೊಳಿಸಲು ಅರಣ್ಯ ಭೂಮಿಯನ್ನು ಬಳಸಿರುವುದು ದೃಢಪಟ್ಟಿದೆ. ಹೀಗಾಗಿ ತೆರವಿಗೆ ಅರ್ಜಿ ಸಲ್ಲಿಸಲಾಗಿದೆ. ಯೋಜನೆಗೆ ಯಾವುದೇ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಯೋಜನೆ ಕಾರ್ಯಗತಗೊಳಿಸಲು ಒಂದೇ ಒಂದು ಮರವನ್ನೂ ಕಡಿಯುವುದಿಲ್ಲ. ಪಂಚತಾರಾ ಹೋಟೆಲ್ ನಿರ್ಮಿಸಲು ಈಗಿರುವ ಬಂಗನೆಗಳನ್ನು ಕೆಡವಲಾಗುತ್ತಿದೆ. ಜೋಗ್ ಫಾಲ್ಸ್ ಪ್ರದೇಶದಲ್ಲಿ ಈಗಿರುವ ಹೋಟೆಲ್‌ಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ಫಾಲ್ಸ್ ಬಳಿಯಿರುವ ಬಂಗಲೆಗಳನ್ನು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಈ ಬಂಗಲೆ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ ಭೂಮಿಯಲ್ಲಿದೆ. ರೋಪ್‌ವೇ ಅಂತ್ಯಕ್ಕೆ ಕಂಬಗಳ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದ್ದು, ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ ಕೆ ದೀಕ್ಷಿತ್ ಅವರು ಮಾತನಾಡಿ, ರಾಜ್ಯ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮತ್ತು ಯೋಜನೆಯನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು