LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜ್ಞಾನಾರ್ಜನೆಗೆ ಕಠಿಣ ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನಕ್ಕೆ ಒತ್ತು ನೀಡಿ

ಬೆಂಗಳೂರು: ಕಠಿಣ ಪರಿಶ್ರಮ ಹಾಗ ಪ್ರಾಮಾಣಿಕ ಪ್ರಯತ್ನದ ಜ್ಞಾನಾರ್ಜನೆಗೆ ಒತ್ತು ನೀಡಿ ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ ಕರೆ ನೀಡಿದರು.
10 ನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 90% ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ, ಜಯನಗರದಲ್ಲಿರುವ ಆಡಿ. ಎಚ್ ಎನ್ ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನ 24 ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಡೀನ್ಸ್ ಮೆರಿಟ್ ಪ್ರಶಸ್ತಿ ಮತ್ತು ನಾಲ್ವರಿಗೆ ಆನಿ ಬೆಸೆಂಟ್ ಪ್ರಶಸ್ತಿಯನ್ನು ನೀಡಿ ಮಾತನಾಡಿದರು. ಪದವಿ ಹಂತದ ಒದು ನಮ್ಮ ವೃತ್ತಿ ಜೀವನದ ಭವಿಷ್ಯದ ಅಡಿಪಾಯ. ಈ ಹಂತದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನಕ್ಕೆ ಒತ್ತು ನೀಡಬೇಕು.

ಪದವಿ ಪಡೆಯುವ ಮುಂದಿನ ವರ್ಷಗಳು ನಿರ್ಣಾಯಕವಾಗಿ ರುತ್ತವೆ. ಉತ್ತಮ ವಿದ್ಯಾಭ್ಯಾಸ ನಮ್ಮ ವೃತ್ತಿ ಜೀವನ ಅಷ್ಟೇ ಅಲ್ಲ ನಮ್ಮ ಜೀವನದ ಸರ್ವತೋಮುಖ ಬೆಳವಣಿಗೆಗೂ ಅಗತ್ಯವಾಗಿದೆ. ಇದನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.ಆಡಿ. ಎಚ್ ಎನ್ ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ. ಜಯದೇವಪ್ಪ ಮಾತನಾಡಿ, ನಾವು ಎಲ್ಲಾಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸುತ್ತೇವೆ ಮತ್ತುಅವರ ಶೈಕ್ಷಣಿಕ ಮತ್ತು ವೃತ್ತಿಪರ ವೃತ್ತಿಜೀವನದಲ್ಲಿ ಅವರ ನಿರಂತರ ಯಶಸ್ಸನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದೇವೆ.

ವಿದ್ಯಾರ್ಥಿಗಳು ಪದವಿಯಲ್ಲೂ ಇದೇ ರೀತಿಯ ಸಾಧನೆ ಮಾಡಲಿ ಎಂದು ಹಾರೈಸುತ್ತೇವೆ ಎಂದರು.ಕಾರ್ಯಕ್ರಮದಲ್ಲಿ ಡಾ. ಸುಬ್ರಹ್ಮಣ್ಯ, ಅಧ್ಯಕ್ಷ ಎನ್‍ಇಎಸ್ ಕರ್ನಾಟಕ, ವಿ. ವೆಂಕಟಶಿವಾರೆಡ್ಡಿ, ಅಧ್ಯಕ್ಷರು - ಆಡಿ. ಊಓಓಅಇ, ಡಾ. ಪಿ.ಎಲ್. ವೆಂಕಟರಾಮ ರೆಡ್ಡಿ ಅಧ್ಯಕ್ಷರು - ನ್ಯಾಷನಲ್ ಕಾಲೇಜು, ಜಯನಗರ, ಡಾ. ಏಓಃ ಮೂರ್ತಿ, ಮುಖ್ಯಮಾರ್ಗದರ್ಶಕರು - ಡಾ. ಊಓಓಅಇ, ಡಾ. ಡಿ. ಜಯದೇವಪ್ಪ ಪ್ರಾಂಶುಪಾಲರು - ಆಡಿ. ಊಓಓಅಇ., ಶಿಕ್ಷಣ ಕ್ಷೇತ್ರದಿಂದ, ಅಧ್ಯಾಪಕರು,ಪೋಷಕರು, ವಿದ್ಯಾರ್ಥಿಗಳು ಮತ್ತು ಪ್ರಮುಖ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು