LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟರ್ಕಿಯಲ್ಲಿ ಭಾರೀ ಬೆಂಕಿ ಅನಾಹುತ 76 ಮಂದಿ ಸಾವು

ಟರ್ಕಿ: ವಾಯುವ್ಯ ಟರ್ಕಿಯಲ್ಲಿರುವ ಸ್ಕೀ ರೆಸಾರ್ಟ್‍ನ ಹೋಟೆಲ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 76 ಜನರು ಸಾವನ್ನಪ್ಪಿದ್ದಾರೆ. ಸುಮಾರು 32 ಮಂದಿ ಗಾಯಗೊಂಡಿದ್ದಾರೆ.ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‍ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‍ನ ರೆಸ್ಟೋರೆಂಟ್‍ನಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.

ರೆಸಾರ್ಟ್‍ನಲ್ಲಿದ್ದ ಇಬ್ಬರು ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಬೆಡ್‍ರೂಂನ ಬೆಡ್‍ಶೀಟ್‍ಗಳನ್ನು ಬಳಸಿ ತಮ್ಮ ಕೋಣೆಗಳಿಂದ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ಹೋಟೆಲ್‍ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ. ಬದುಕುಳಿದವರು ತಮ್ಮ ಭಯಾನಕ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಬೆಂಕಿಯಿಂದ ಹೋಟೆಲ್ ಹೊಗೆಯಿಂದ ಆವೃತವಾಗಿತ್ತು, ಅತಿಥಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳುವ ಸ್ಥಳವನ್ನು ಹುಡುಕಾಡುತ್ತಿದ್ದರು.

ಕಾರ್ತಲ್ಕಯಾ ಇಸ್ತಾನ್‍ಬುಲ್‍ನಿಂದ ಪೂರ್ವಕ್ಕೆ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಪರ್ವತದಲ್ಲಿರುವ ಜನಪ್ರಿಯ ಸ್ಕೀ ರೆಸಾರ್ಟ್ ಆಗಿದೆ. ಬೆಂಕಿ ಅವಘಡ ಸಂಭವಿಸಿದ ಸಮಯದಲ್ಲಿ ಈ ಪ್ರದೇಶದಲ್ಲಿ ಹೋಟೆಲ್‍ಗಳು ಜನರಿಂದ ತುಂಬಿದ್ದವು. 30 ಅಗ್ನಿಶಾಮಕ ವಾಹನಗಳು ಮತ್ತು 28 ಆಂಬ್ಯುಲೆನ್ಸ್‍ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು