LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಟಿಕೆಟ್ ಕಾರ್ಯತಂತ್ರ ವಿಧಾನಸಭಾ ಉಪಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪುಚನಾವಣೆ ಘೋಷಣೆಯಾಗಿರುವ ಬೆನ್ನಲ್ಲೆ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾಗೂ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.

ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳು ಪ್ರಮುಖವಾಗಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಂದ ತೆರವಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತೀವ್ರ ಕಸರತ್ತು ನಡೆದಿದೆ.ಈಗಾಗಲೇ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾಗಲು ಎನ್‍ಡಿಎ ಮೈತ್ರಿಕೂಟ ಪಕ್ಷಗಳಾದ ಜೆಡಿಎಸ್ ಬಿಜೆಪಿಯಲ್ಲಿ ಪೈಪೋಟಿ ನಡೆದಿದ್ದು, ಟಿಕೆಟ್ ಯಾರಿಗೆ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾವೇ ಅಭ್ಯರ್ಥಿ ಎಂದು ಕ್ಷೇತ್ರದಾದ್ಯಂತ ಸುದ್ದಿ ಹಬ್ಬಿಸಿದ್ದಾರೆ. ಇದರ ಮಧ್ಯೆ ಇಂದು ಮಾಜಿ ಸಂಸದೆಯೂ ಆಗಿರುವ ಮಾಜಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಯವರು ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಮುಖರಿಗೆ ಪತ್ರ ಬರೆದಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಿಗೂ ಪತ್ರ ಬರೆದು ಚನ್ನಪಟ್ಟಣದೊಂದಿಗೆ 20 ವರ್ಷಗಳನಂಟು ಹೊಂದಿರುವ ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ನಾನು ಸ್ಥಳೀಯ ನಾಯಕಿಯಾಗಿದ್ದೇನೆ, 2004 ರಲ್ಲಿ ದೇವೇಗೌಡರನ್ನೇ ಸೋಲಿಸಿದ್ದವಳು. ಕ್ಷೇತ್ರದ ಜನರ ಒಡನಾಟ, ನಾಡಿಮಿಡಿತ ಗೊತ್ತಿದೆ. ನನಗೆ ಟಿಕೆಟ್ ನೀಡಿದರೆ ಖಂಡಿತ ಗೆದ್ದುಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮತ್ತೊಂದೆಡೆ ಬಿಜೆಪಿ ಟಿಕೆಟ್ ಸಂಬಂಧ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾಗಿರುವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿ ಸದಸ್ಯರಾಗಿರುವ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಹಳ ಹೊತ್ತಿನ ಕಾಲ ಸಮಾಲೋಚನೆ ನಡೆಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಈ ಕ್ಷೇತ್ರದಲ್ಲಿ ತಾವೇ ಸ್ಪರ್ಧೆ ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಹಾಗೂ ಗೆಲುವಿನ ಜವಾಬ್ದಾರಿ ತಮ್ಮ ಮೇಲಿದೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಗೆಲುವಿಗೆ ಕೆಲಸ ಮಾಡುತ್ತೇನೆ. ಇಂದು ಯಡಿಯೂರಪ್ಪ ಅವರ ಜತೆ ಮೊದಲಿಗೆ ಚರ್ಚೆ ಮಾಡಿದ್ದೇನೆ. 19ರ ನಂತರ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.

ಈಗಾಗಲೇ ಶಿಗ್ಗಾಂವಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖಂಡರಾದ ಶ್ರೀಕಾಂತ್ ದುಂಡಿಗೌಡರ ಎಂ.ಎಸ್ ಅಕ್ಕಿ ಸೇರಿದಂತೆ ಹಲವು ನಾಯಕರು ಹೆಸರು ಕೇಳಿಬರುತ್ತಿದೆ.ಕಾಂಗ್ರೆಸ್‍ನಿಂದ ಅಜ್ಜಂಪೀರ್ ಖಾದ್ರಿ ಮಾದರಿ, ಯಾಸೀನ್ ಖಾನ್ ಪಠಾಣ್, ರಾಜುಕುನ್ನೂರು, ಸೇರಿದಂತೆ ಪ್ರಮುಖವಾಗಿ 10ಕ್ಕೂ ಹೆಚ್ಚು ಮಂದಿಯ ಹೆಸರು ಕೇಳಿ ಬರತ್ತಿದ್ದು, ಕಾಂಗ್ರೇಸ್ ಪಕ್ಷ ಈ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಬಗೆಬಗೆಯ ತಂತ್ರಗಾರಿಕೆ ಹೂಡುತ್ತಿದೆ ಎಂದು ಹೇಳಲಾಗಿದೆ.

ಬಳ್ಳಾರಿ ಜಿಲ್ಲೆ ಸಂಡೂರು ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ದಕ್ಕಬೇಕೆಂಬ ಚುನಾವಣಾ ಜವಾಬ್ದಾರಿಯನ್ನು ಪಕ್ಷದ ಮುಖಂಡರಾಗಿರುವ ಜಮೀರ್ ಅಹಮ್ಮದ್ ಖಾನ್ ಅವರ ಜವಾಬ್ದಾರಿಗೆ ವಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು