LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಟಿಕೆಟ್ ಕ್ಲೈಮ್ಯಾಕ್ಸ್ ವಿಧಾನಸಭೆ ಉಪಚುನಾವಣೆ: ಕುತೂಹಲಘಟ್ಟದಲ್ಲಿ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಚುನಾವಣೆಗಳಿಗೆ ಸಂಬಂಧಪಟ್ಟಂತೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಈಗಾಗಲೇ ಎನ್‍ಡಿಎ ಪ್ರಮುಖ ಮಿತ್ರಪಕ್ಷವಾದ ಬಿಜೆಪಿ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಲ್ಲಿ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರೆ, ಜೆಡಿಎಸ್ ಇನ್ನು ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಕಾಂಗ್ರೆಸ್ ಪಕ್ಷದ ವತಿಯಿಂದ ಮೂರು ಕ್ಷೇತ್ರಗಳಿಗೆ ಇದುವರೆಗೂ ಯಾವುದೇ ಅಭ್ಯರ್ಥಿ ಘೋಷಣೆಯಾಗದಿದ್ದರು ಸಂಡೂರು ಕ್ಷೇತ್ರದಿಂದ ಸಂಸದ ತುಕಾರಂ ಪತ್ನಿ ಅನ್ನಪೂರ್ಣ ಅವರನ್ನು ಕಣಕ್ಕಿಳಿಸುವುದಾಗಿ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಶ್ಚರ್ಯಕರವೆಂದರೆ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಇದುವರೆಗೂ ಕಾಂಗ್ರೆಸ್ ಜೆಡಿಎಸ್ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಸಿ.ಪಿ. ಯೋಗೇಶ್ವರ್ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂಬ ನಿಲುವು ತಾಳಿದ್ದಾರೆ.ಆದರೆ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.
ಒಂದೆಡೆ ಯೋಗೇಶ್ವರ್ ಇಂದು ತಮ್ಮ ಬೆಂಬಲಿಗರ ಸಭೆ ನಡೆಸುತ್ತಿದ್ದು, ಸಂಜೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಬೆಂಗಳೂರಿನಲ್ಲಿ ತಿಳಿಸಿ ಗುರುವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಹೇಳಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಸಿದ್ಧಾಂತ ಒಪ್ಪಿ ಯಾರು ಬೇಕಾದರೂ ಪಕ್ಷ ಸೇರ್ಪಡೆಯಾಗಬಹುದು ಎಂದಿರುವುದು ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆಸುಳಿವು ನೀಡಿದಂತಾಗಿದೆ ಎಂದು ವ್ಯಾಖ್ಯಾನಗಳು ಕೇಳಿಬರುತ್ತಿವೆ.

ಒಂದು ವೇಳೆ ಕಾಂಗ್ರೆಸ್‍ಗೆ ಯೋಗೇಶ್ವರ್ ಬಂದು ಪಕ್ಷದಿಂದ ಸ್ಪರ್ಧೆ ಮಾಡದೇ ಹೋದಲ್ಲಿ ಪರ್ಯಾಯವಾಗಿ ಪಕ್ಷದ ಅಭ್ಯರ್ಥಿಯಾಗಲು ರಘುನಂದನ್ ರಾಮಣ್ಣ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಹ ಹೇಳಲಾಗುತ್ತಿದೆ.ಮತ್ತೊಂದೆಡೆ ಮಾಜಿ ಸಂಸದ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರಿಗೆ ಸ್ಪರ್ಧೆ ಮಾಡಲು ಒತ್ತಾಯ ಕೇಳಿಬರುತ್ತಿದೆ ಎಂದು ಸ್ವತಃ ಡಿ.ಕೆ.ಸುರೇಶ್ ಅವರೇ ಹೇಳಿದ್ದಾರೆ.

ಜೆಡಿಎಸ್ ವತಿಯಿಂದ ಕೇಂದ್ರ ಸಚಿವ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಚನ್ನಪಟ್ಟಣದ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಸಭೆ ನಡೆಸುತ್ತಿದ್ದು, ಸಂಜೆ ವೇಳೆಗೆ ಪಕ್ಷದ ವತಿಯಿಂದ ಅಧಿಕೃತ ಅಭ್ಯರ್ಥಿಯ ಪ್ರಕಟಣೆ ಮಾಡುವುದಾಗಿ ಹೇಳಿದ್ದಾರೆ.
ಒಟ್ಟಾರೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಗಳು ಯಾರು ಎಂಬುದು ತೀವ್ರ ಕುತೂಹಲದ ಸಂಗತಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು