LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟಿ20 ಸರಣಿ ಭಾರತದ ಕೈವಶ

ದೆಹಲಿ: ಯುವ ಬ್ಯಾಟರ್‍ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್ ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಬಾಂಗ್ಲಾದೇಶ ಎದುರಿನ ಎರಡನೇ ಟಿ20 ಪಂದ್ಯವನ್ನು 86 ರನ್‍ಗಳಿಂದ ಜಯಿಸಿತು.

ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ 2-0ಯಿಂದ ಗೆದ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ನಿತೀಶ್ ರೆಡ್ಡಿ (74 ರನ್) ಆಕರ್ಷಕ ಬ್ಯಾಟಿಂಗ್ ಮಾಡಿದರು. ರಿಂಕು (53 ರನ್) ಅವರೂ ಬ್ಯಾಟಿಂಗ್‍ನಲ್ಲಿ ಅಬ್ಬರಿಸಿದರು. ಭಾರತ ತಂಡವು 20 ಓವರ್‍ಗಳಲ್ಲಿ 9 ವಿಕೆಟ್‍ಗಳಿಗೆ 221 ರನ್ ಗಳಿಸಿತು.

ತಮ್ಮ ವೃತ್ತಿಜೀವನದ ಎರಡನೇ ಅಂತರರಾಷ್ಟ್ರೀಯ ಟಿ20 ಪಂದ್ಯವಾಡಿದ ನಿತೀಶ್ 27 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಗಳಿಸಿದರು. ಸರಣಿಯ ಮೊದಲ ಪಂದ್ಯದಲ್ಲಿ ಮಿಂಚಿದ್ದ ಹಾರ್ದಿಕ್ ಇಲ್ಲಿ ಮತ್ತೆ ಅಬ್ಬರಿಸಿದರು.ಕಠಿಣ ಗುರಿಯನ್ನು ಬೆನ್ನಟ್ಟಿದ ಪ್ರವಾಸಿ ತಂಡವು 20 ಓವರ್‍ಗಳಲ್ಲಿ 9 ವಿಕೆಟ್‍ಗಳಿಗೆ 135 ರನ್ ಗಳಿಸಿತು. ತಂಡದ ಮೆಹಮುದುಲ್ಲಾ (41 ರನ್) ಹೊರತುಪಡಿಸಿ ಉಳಿದವರು ನಿರಾಸೆ ಮೂಡಿಸಿದರು. ಬ್ಯಾಟಿಂಗ್ ಜೊತೆಗೆ ಬೌಲಿಂಗ್‍ನಲ್ಲಿಯೂ ಮಿಂಚಿದ ನಿತೀಶ್ 2 ವಿಕೆಟ್ ಗಳಿಸಿದರು. ವರುಣ್ ಚಕ್ರವರ್ತಿ ಕೂಡ 2 ವಿಕೆಟ್ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು