LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೀಂ ಇಂಡಿಯಾಗೆ ಗಂಭೀರ್ ಕೋಚ್

ಮುಂಬೈ: ರಾಹುಲ್ ದ್ರಾವಿಡ್ ರಿಂದ ತೆರವಾದ ಟೀಂ ಇಂಡಿಯಾ ಮುಂದಿನ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ರನ್ನು ಆಯ್ಕೆ ಮಾಡಲಾಗಿದೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ವಿಚಾರವನ್ನು ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಟೀಂ ಇಂಡಿಯಾ ಮುಂದಿನ ಕೋಚ್ ಎನ್ನುವುದು ಹೆಚ್ಚು ಕಡಿಮೆ ಫಿಕ್ಸ್ ಆಗಿತ್ತು.

ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿರಲಿಲ್ಲ. ಗಂಭೀರ್ ಕೆಕೆಆರ್ ತಂಡಕ್ಕೆ ಗುಡ್ ಬೈ ಹೇಳಿ, ಈಡನ್ ಗಾರ್ಡನ್ ನಲ್ಲಿ ವಿದಾಯ ವಿಡಿಯೋವೊಂದರ ಚಿತ್ರೀಕರಣದಲ್ಲೂ ಭಾಗಿಯಾಗಿದ್ದರು. ಹೀಗಿದ್ದರೂ ಘೋಷಣೆ ಯಾಕಾಗಿಲ್ಲ ಎಂಬುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಆದರೆ ಅವರನ್ನು ಕೋಚ್ ಹುದ್ದೆಗೆ ತಡವಾಗಿ ಘೋಷಣೆ ಮಾಡಲು ಕಾರಣವೂ ಇದೆ. ಗೌತಮ್ ಗಂಭೀರ್ ಜೊತೆಗೆ ಈಗಾಗಲೇ ಬಿಸಿಸಿಐ ಕೋಚ್ ಕಾರ್ಯತಂತ್ರದ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ ವೇತನ ವಿಚಾರ ಇನ್ನೂ ಫೈನಲ್ ಆಗಿರಲಿಲ್ಲ. ರಾಹುಲ್ ದ್ರಾವಿಡ್ 12 ಕೋಟಿ ಸಂಭಾವನೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಗಂಭೀರ್ ಅದಕ್ಕಿಂತಲೂ ಹೆಚ್ಚಿನ ಮೊತ್ತಕ್ಕೆ ಬೇಡಿಕೆಯಿಟ್ಟಿದ್ದರಂತೆ.

ಈ ವಿಚಾರವಾಗಿ ಈಗ ಬಿಸಿಸಿಐ ಜೊತೆ ಗಂಭೀರ್ ಮಾತುಕತೆ ನಡೆಯುತ್ತಿತ್ತು. ಸಂಭಾವನೆ, ಎಷ್ಟು ವರ್ಷದ ಒಪ್ಪಂದ ಇತ್ಯಾದಿ ವಿಚಾರಗಳು ಇನ್ನೂ ಫೈನಲ್ ಆಗಿರಲಿಲ್ಲ. ಇದೀಗ ಇದೆಲ್ಲವೂ ಅಂತಿಮವಾದ ಬಳಿಕ ಅಧಿಕೃತವಾಗಿ ಗಂಭೀರ್ ಭಾರತ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು