LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೀಸರ್ ಬಿಡುಗಡೆ ಮೂಲಕ ಪ್ರಜ್ವಲ್ ದೇವರಾಜ್‍ರಿಗೆ ಹುಟ್ಟುಹಬ್ಬದ ಶುಭಾಶಯ ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ.

ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ "ಮಾಫಿಯಾ" ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST