LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೀಸರ್ ಹಾಗೂ ಹಾಡುಗಳಲ್ಲಿ "ನೆನಪುಗಳ ಮಾತು ಮಧುರ"

RED & WHITE ಸೆವೆನ್ ರಾಜ್ ನಿರ್ಮಾಣದ ಹಾಗೂ ಅಫ್ಜಲ್ ನಿರ್ದೇಶನದ ಈ ಚಿತ್ರ ತೆರೆಗೆ ಬರಲು ಸಿದ್ಧಪತ್ರಕರ್ತ, ಕಾರ್ಯಕಾರಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನೃತ್ಯ ನಿರ್ದೇಶನದ ಜೊತೆಗೆ ನಿರ್ದೇಶನವನ್ನು ಮಾಡಿರುವ ಹಾಗೂ RED & WHITE ಸೆವೆನ್ ರಾಜ್ ನಟಿಸಿ, ನಿರ್ಮಿಸಿರುವ "ನೆನಪುಗಳ ಮಾತು ಮಧುರ" ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ ನರಸಿಂಹಲು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

"ನೆನಪುಗಳ ಮಾತು ಮಧುರ" ಚಿತ್ರದಲ್ಲಿ ಆರು ಕಥೆಗಳ ಸಂಗಮವಿದೆ. ಹಾಗೆ ಆರು ಜೋಡಿಗಳ ಪ್ರೇಮಕಥೆಯೂ ಇದೆ. ಸದ್ಯದಲ್ಲೇ ನಾವು ಎದುರುಸುತ್ತಿರುವ ಹಾಗೂ ಕಣ್ಣಮುಂದೆ ನೋಡುತ್ತಿರುವ ಕೆಲವು ವಿಷಯಗಳೆ ಈ ಚಿತ್ರದ ಕಥೆಗೆ ಸ್ಪೂರ್ತಿ. ಪ್ರಸ್ತುತ ಚಿತ್ರದ ಚಿತ್ರೀಕರಣ ಹಾಗೂ ಉಳಿದ ಕೆಲಸಗಳು ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇಂದು ಟೀಸರ್ ಹಾಗೂ ಹಾಡುಗಳು ಅನಾವರಣವಾಗಿದೆ. FMD music ಯೂಟ್ಯೂಬ್ ಚಾನಲ್ ನಲ್ಲಿ ಹಾಡುಗಳನ್ನು ನೋಡಬಹುದು ಎಂದು ನಿರ್ದೇಶಕ ಅಫ್ಜಲ್ ತಿಳಿಸಿದರು.
ನಿರ್ದೇಶಕ ಅಫ್ಜಲ್ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ.

ಜೊತೆಗೆ ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ. ಮಾರ್ಚ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಸುತ್ತಿದ್ದೇನೆ ಎಂದು ತಿಳಿಸಿದ ನಿರ್ಮಾಪಕ ಸೆವೆನ್ ರಾಜ್, ನನಗೆ ಏಳು ಭಾಷೆಗಳ ಚಿತ್ರಗಳಲ್ಲಿ ನಟಿಸುವ ಆಸೆಯಿದೆ. ಈಗಾಗಲೇ ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದೇನೆ. ಸದ್ಯದಲ್ಲೇ ಹಿಂದೆ ಚಿತ್ರದಲ್ಲೂ ಅಭಿನಯಿಸಲಿದ್ದೇನೆ ಎಂದರು. ಹಾಡುಗಳ ಕುರಿತು ರಾಜು ಎಮ್ಮಿಗಾನೂರು ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ವಸಿಷ್ಠ ಬಂಟನೂರು, ರಣವೀರ್, ರಾಜ್ ಪ್ರಭು, ಅಂಜಲಿ, ರೇಖಾ ರಮೇಶ್, ವಾದ್ಯ, ರನ್ವಿತ ಚಿತ್ರದ ಕುರಿತು ಮಾತನಾಡಿದರು. ಆಡಿಯೋ ಸಂಸ್ಥೆಯ ರಮೇಶ್ ಭಂಡಾರಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಚಿತ್ರದ ಉಳಿದ ತಾರಾಗಣದಲ್ಲಿ ವಿನಯ್ ಕುಮಾರ್ , ನಾಗರಾಜ್ ಗುಬ್ಬಚ್ಚಿ, ನಾಗೇಂದ್ರ ಅರಸ್, ಹುಸೇನ್, ಅರವಿಂದ್ ಇದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು