LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆನಿಸ್: ಯಾನಿಕ್ ಸಿನ್ನರ್ ಮುಡಿಗೆ ಶಾಂಘೈ ಕಿರೀಟ

ಶಾಂಘೈ: ವಿಶ್ವದ ಅಗ್ರಮಾನ್ಯ ಆಟಗಾರ ಯಾನಿಕ್ ಸಿನ್ನರ್ ಇಲ್ಲಿ ನಡೆದ ಶಾಂಘೈ ಮಾಸ್ಟರ್ಸ್ ಸೂಪರ್ 1000 ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‍ನಲ್ಲಿ 24 ಬಾರಿಯ ಗ್ರ್ಯಾನ್ ಸ್ಲಾಮ್ ಚಾಂಪಿಯನ್ ನೊವಾಕ್ ಜೊಕೊವಿಕ್ ಅವರನ್ನು ನೇರ ಸೆಟ್‍ಗಳಿಂದ ಮಣಿಸಿ ಕಿರೀಟವನ್ನು ಮುಡಿಗೇರಿಸಿಕೊಂಡರು.

ಭಾನುವಾರ ನಡೆದ ಹಣಾಹಣಿಯಲ್ಲಿ 23 ವರ್ಷ ವಯಸ್ಸಿನ ಸಿನ್ನರ್ 7-6 (7/4), 6-3ರಿಂದ ನಾಲ್ಕನೇ ಶ್ರೇಯಾಂಕದ ಸರ್ಬಿಯಾದ ಆಟಗಾರನನ್ನು ಹಿಮ್ಮೆಟ್ಟಿಸಿದರು. ಈ ಹೋರಾಟ ಕೇವಲ 1 ಗಂಟೆ 37 ನಿಮಿಷದಲ್ಲಿ ಮುಕ್ತಾಯವಾಯಿತು.ಇಟಲಿಯ ಆಟಗಾರ ಸಿನ್ನರ್‍ಗೆ ಇದು ಋತುವಿನ ಏಳನೇ ಪ್ರಮುಖ ಪ್ರಶಸ್ತಿಯಾಗಿದೆ. ಆಸ್ಟ್ರೇಲಿಯಾ ಓಪನ್, ಅಮೆರಿಕಾ ಓಪನ್ ಚಾಂಪಿಯನ್ ಆಗಿರುವ ಅವರು, ಎರಡು ವಾರದ ಹಿಂದೆ ಚೀನಾ ಓಪನ್ ಚಾಂಪಿಯನ್ ಆಗಿದ್ದರು.

2016ರಲ್ಲಿ ಇಂಗ್ಲೆಂಡ್‍ನ ಆಯಂಡಿ ಮರ್ರೆ ಒಂಬತ್ತು ಪ್ರಶಸ್ತಿ ಗೆದ್ದ ನಂತರ ಒಂದು ಋತುವಿನಲ್ಲಿ ಆರಕ್ಕೂ ಹೆಚ್ಚು ಕಿರೀಟ ಮುಡಿಗೇರಿಸಿಕೊಂಡ ಮೊದಲ ಆಟಗಾರ ಎಂಬ ಹಿರಿಮೆಗೆ ಸಿನ್ನರ್ ಪಾತ್ರವಾದರು. ಅಲ್ಲದೆ, ಜೊಕೊವಿಚ್ ವಿರುದ್ಧ ಗೆಲುವಿನ ದಾಖಲೆಯನ್ನು 4-4ಕ್ಕೆ ಸಮಗೊ ಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು