LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಲೋಕಾ' ದಾಳಿ:  ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ, 

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದು ಅಲ್ಲಿ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. 23ಕ್ಕೂ ಹೆಚ್ಚು ಚಿನ್ನದ ಸರ, 28ಕ್ಕೂ ಹೆಚ್ಚು ಜೊತೆ ಓಲೆ, ಮುತ್ತಿನ ಹಾರ ಪತ್ತೆಯಾಗಿದೆ. ಇದು ಅಷ್ಟೇ ಅಲ್ಲದೆ ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್​, ಚಿನ್ನದ ಉಂಗುರಗಳು, 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು 8ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್​ ವಾಚ್​ಗಳು ಸಿಕ್ಕಿವೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್​ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್​ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದ್ದು. ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST