LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಠಾಣೆ ಚಿತ್ರಕ್ಕೆ ಯು/ಎ ಸೆನ್ಸಾರ್ ಪ್ರಮಾಣ ಪತ್ರ

ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ಕನ್ನಡದ ಹೆಸರಾಂತ ಸಾಹಸ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಪ್ರವೀಣ್ "ಠಾಣೆ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ವಿದೂಷಿ ಹರಿಣಾಕ್ಷಿ , ಬಿ.ವಿ.ರಾಜರಾಂ, ಬಾಲ್ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್, ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

20 ವರ್ಷಗಳ ಹಿಂದೆ ಮಾಧ್ಯಮಗಳು, ಪೊಲೀಸ್ ಇಲಾಖೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಇಲಾಖೆಗಳ ಗಮನ ಸೆಳೆಯುವ ಕಾಲದಲ್ಲಿ ನಾಯಕ ಕಾಳಿ ನ್ಯಾಯಕ್ಕಾಗಿ ಯಾವ ರೀತಿಯ ಹೋರಾಟ ಮಾಡಿದ ಎನ್ನುವುದೇ ಠಾಣೆ ಅ/ಔ ಶ್ರೀರಾಂಪುರ.. ಹಾಗೆ ಹಳೆಯ ಕಟ್ಟಡ ಗಳು ಸ್ಥಳ ಗಳು ಹುಡುಕಿ ಚಿತ್ರಿಕರಣ ಮಾಡಲಾಗಿದೆ ಎಂದು ಕಥೆ ಬರೆದು ನಿರ್ದೇಶನ ಮಾಡಿರುವ ಎಸ್. ಭಗತ್ ರಾಜ್ ತಿಳಿಸಿದ್ದಾರೆ. ಮೂರು ಸುಮಧುರ ಹಾಡುಗಳಿಗೆ ಮಾನಸ ಹೊಳ್ಳ ಸಂಗೀತ ನೀಡಿದ್ದಾರೆ. ಮಜಾ ಟಾಕೀಸ್ ರೇಮೋ ಹಾಡುಗಳ ರಚನೆ ಮಾಡಿದ್ದು, ರಾಜೇಶ್ ಕೃಷ್ಣ, ಮಾನಸ ಹೊಳ್ಳ ಹಾಗೂ ರಿಯಾಲಿಟಿ ಶೋ ನಾ ಮಕ್ಕಳು ಹಾಡಿ ಗಮನ ಸೆಳೆದಿದ್ಧಾರೆ.

ಪ್ರಶಾಂತ್ ಸಾಗರ್ ಛಾಯಾಗ್ರಹಣ, ಹಿರಿಯ ಸಂಕಲನಕಾರ ಸುರೇಶ್ ಅರಸ್ ಸಂಕಲನ, ಸಹ ನಿರ್ದೇಶನ ದಾವಣಗೆರೆ ರವಿಚಂದ್ರ, ನಿರ್ಮಾಣ ನಿರ್ವಹಣೆ ರವಿಚಂದ್ರ ಅವರದ್ದು ಈ ಚಿತ್ರಕ್ಕಿದೆ. ಕೌರವ ವೆಂಕಟೇಶ್ ಹಾಗೂ ಟೈಗರ್ ಶಿವು ಸಾಹಸ ಸಂಯೋಜನೆಯಲ್ಲಿ ಐದು ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ನಾಯಕ ಪ್ರವೀಣ್ ಅವರು ಭರ್ಜರಿ ಯಾಗಿ ಆಕ್ಷನ್ ಮಾಡಿದ್ದಾರೆ.ಇದೇ ಮಾರ್ಚ್ ತಿಂಗಳಲ್ಲಿ ಲೇಖ ಆಡಿಯೋ ಸಂಸ್ಥೆಯಿಂದ ಠಾಣೆ ಧ್ವನಿ ಸುರುಳಿ ಬಿಡುಗಡೆ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು