LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಡಬ್ಲೂಪಿಎಲ್: ಮೊದಲ ಬಾರಿ ಸೂಪರ್ ಓವರ್! ಗೆದ್ದು ಬೀಗಿದ ಯುಪಿ ವಾರಿಯರ್ಸ್!

ಬೆಂಗಳೂರು: ರೋಮಾಂಚಕ ಟೈ ಬಳಿಕ ಸೂಪರ್ ಓವರ್ ಕಂಡ ಪಂದ್ಯದಲ್ಲಿ ತಂಡವು ಗಂದ್ದು ಬೀಗಿದೆ. ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮೊದಲ ಸೂಪರ್ ಓವರ್ ಕಂಡ ರೋಮಾಂಚಕ ಪಂದ್ಯದಲ್ಲಿ ಯುವಿ ವಾರಿಯರ್ಸ್ ತಂಡವು ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನುಸೋಲಿಸಿ ಬೀಗಿದೆ.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತ್ತು. ಇದನ್ನು ಬೆಂಬತ್ತಿ ಹೊರಟ ಯುಪಿ ವಾರಿಯರ್ಸ್ 9 ವಿಕೆಟ್ ನಷ್ಟಕ್ಕೆ ಅಷ್ಟೇ ರನ್ ಗಳನ್ನು ಗಳಿಸಲು ಶಕ್ತವಾಯಿತು. ಹೀಗಾಗಿ ಮಹಿಳಾ ಪ್ರೀಮಿಯರ್ ಲೀಗ್ ನ ಇತಿಹಾಸದಲ್ಲೇ ಮೊದಲ ಬಾರಿಗೆ ಸೂಪರ್ ಓವರ್ ಅನ್ನು ಆಡಿಸಲಾಯಿತು.

ರೋಮಾಂಚಕ ಸೂಪರ್ ಓವರ್ನಿಯಮದಂತೆ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ಗಳಿಸಿದ್ದು ಒಂದು ವಿಕೆಟ್ ನಷ್ಟಕ್ಕೆ ಕೇವಲ 8 ರನ್ ಗಳನ್ನಷ್ಟೇ. ಈ ಹಂತದಲ್ಲಿ ಆರ್ ಸಿಬಿ ಗೆದ್ದೇ ಬಿಟ್ಟಿತೆಂದು ಎಲ್ಲರೂ ಅಂದುಕೊಂಡಿದ್ದರು. ಸಣ್ಣ ಮೊತ್ತ ಎಂಬುದು ಒಂದು ಕಾರಣವಾಗಿದ್ದರೆ, ಭರವಸೆಯ ಬ್ಯಾಟರ್ ಸ್ಮೃತಿ ಮಂದಾನ ಅವರು ರಿಚಾ ಘೋಷ್ ಅವರೊಂದಿಗೆ ಕಣಕ್ಕಿಳಿದಿದ್ದು ಮತ್ತೊಂದು ಕಾರಣ. ಆದರೆ ಇವರಿಬ್ಬರು 4 ರನ್ನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಅಲ್ಲಿಗೆ ಯುಪಿ ವಾರಿಯರ್ಸ್ ಮಹಿಳೆಯರು ಜಯಘೋಷ ಮೊಳಗಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು