LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ "ಕಟ್ಲೆ" ಸಿನಿಮಾದ ಮೊದಲ ಹಾಡು

ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು "ಕಟ್ಲೆ" ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು. ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ ಅವರು. ಅವರು ನಮ್ಮ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು