LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು `ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ' ಚಿತ್ರದ ಟ್ರೇಲರ್

"ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ" ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚೆಗೆ "ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ" ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು. ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಶ್ರೀರಾಮ  ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ಮಂಜು ಕವಿಯವರದು.
ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ರವರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯವೈಭವಿ ನಟಿಸಿದ್ದಾರೆ. ಚಂದ್ರಪ್ರಭ ಗೊಬ್ರಗಾಲ, ಮುಖೇಶ್, ಶಿವರೆಡ್ಡಿ, ಮೂಗು ಸುರೇಶ್, ಜಗದೀಶ್ ಕೊಪ್ಪ, ಟೆನ್ನಿಸ್ ಕೃಷ್ಣ, ರೇಖಾ ದಾಸ್, ಸಿಲ್ಲಿ ಲಲ್ಲಿ ಶ್ರೀನಿವಾಸ್ ಗೌಡ್ರು, ಚಿದಾನಂದ, ವಿನೋದ್, ತಾರಾ, ಚೈತ್ರ ಕೊಟ್ಟೂರು, ಪವಿತ್ರ ,ಧನುಷ್,ಯಶೋದಮ್ಮ,ನಾಗರಾಜ್,ಸುರೇಶ್ ಉದ್ಬೂರು ಮುಂತಾದವರು ತಾರಾಬಳಗದಲ್ಲಿದ್ದಾರೆ.

ವೆಂಕಿ ಯುಡಿಐ ಸಂಕಲನ , ರೇಣು ಕುಮಾರ್ ಛಾಯಾಗ್ರಹಣವಿರುವ ಈ ನಿರ್ದೇಶನ ತಂಡದಲ್ಲಿ ಎಸ್.ಜೆ ಸಂಜಯ್, ಗಿರೀಶ್ ಸಾಕಿ, ಸಂಗೀತ ಶೆಟ್ಟಿ, ರಾಜಿ ಕಾರ್ಯ ನಿರ್ವಹಿಸಿದ್ದಾರೆ. ಕುಟುಂಬ ಸಮೇತ ನೋಡಬಹುದಾದ ಈ ಚಿತ್ರವನ್ನು ಅತಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ ಎಂದು ನಿರ್ಮಾಪಕ ಸಿ ಎಸ್ ವೆಂಕಟೇಶ್ ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು