LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಪಾರ ಜ್ಞಾನ ಮತ್ತು ಅಧ್ಯಯನ ಕಾರಣದಿಂದಾಗಿ ಭಾರತದ ಸಂವಿಧಾನ ಶ್ರೇಷ್ಠವಾಗಿದೆ: ಎನ್.ಮಹೇಶ್

ದೊಡ್ಡಬಳ್ಳಾಪುರ: ಭಾರತದ ಸಂವಿಧಾನ ಶ್ರೇಷ್ಠವಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಅಪಾರ ಜ್ಞಾನ ಮತ್ತು ಅಧ್ಯಯನ ಕಾರಣವಾಗಿದೆ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎನ್.ಮಹೇಶ್ ತಿಳಿಸಿದರು.ಅವರು ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಸಂವಿಧಾನಾತ್ಮಕವಾಗಿ ದೊರಕಿಸಿ ಕೊಟ್ಟವರು. ಮಹಿಳೆಯರ ಹಕ್ಕುಗಳಿಗಾಗಿ ತಮ್ಮ ಕಾನೂನು ಮಂತ್ರಿಯ ಪದವಿಗೆ ರಾಜೀನಾಮೆಯನ್ನು ನೀಡಿದವರು ಎಂದರು.ಡಾ. ಬಿ.ಆರ್.ಅಂಬೇಡ್ಕರ್ ಅವರು ಮಹಿಳಾ ಪರವಾದ ಹಿಂದೂ ಕೋಡ್ ಬಿಲ್, ಮಹಿಳಾ ಕಾರ್ಮಿಕರ ಕಲ್ಯಾಣ, ಸಮಾನ ವೇತನ, ತಾಯ್ತನದ ಸೌಲಭ್ಯ, ಮಹಿಳಾ ಶಿಕ್ಷಣ ಮುಂತಾದ ಹಕ್ಕುಗಳನ್ನು ದೊರೆಯುವಂತೆ ಮಾಡಲು ಶ್ರಮಿಸಿದರು. ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳ್ಳಬೇಕು ಎಂಬ ವಿಚಾರಗಳನ್ನು ಅಂಬೇಡ್ಕರ್ ಅವರು ಪ್ರಬಲವಾಗಿ ಪ್ರತಿಪಾದಿಸಿದರು. ಮಹಿಳೆಯರ ಹಲವು ವಿಚಾರಗಳನ್ನು ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳಲ್ಲಿ ನಾವು ಕಾಣಬಹುದಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುತ್ತವೆ. ಸಾಮಾಜಿಕ ನ್ಯಾಯವನ್ನು ಜಾರಿ ಮಾಡುವ ಸಲುವಾಗಿ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ಅಂಶಗಳನ್ನು ಅಳವಡಿಸಿದರು. ಸಮಸಮಾಜ ನಿರ್ಮಾಣವೇ ಅಂಬೇಡ್ಕರ್ ಅವರ ಮುಖ್ಯ ಗುರಿಯಾಗಿತ್ತು. ವಿಶ್ವದಲ್ಲಿ ನಮ್ಮ ಭಾರತ ದೇಶಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ಲಭಿಸುತ್ತಿರುವುದೇ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿ,ಡಾ.ಅಂಬೇಡ್ಕರ್ ಅವರ ಚಿಂತನೆಗಳು, ಬರಹ ಭಾಷಣಗಳು, ಜೀವನ ಚರಿತ್ರೆ ಎಲ್ಲರಿಗೂ ಸುಲಭವಾಗಿ ತಲುಪುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮಗಳನ್ನು ಜಿಲ್ಲೆಯ ಕಾಲೇಜುಗಳಲ್ಲಿ ನಡೆಸುತ್ತಿದೆ. ವಿಶೇಷ ಉಪನ್ಯಾಸಗಳ ಜೊತೆಗೆ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀನಿವಾಸ್, ರವಿ ಮುಂತಾದವರು ಭಾಗವಹಿಸಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅಂಗವಾಗಿ ನಡೆದ ರಸಪ್ರಶ್ನೆ, ಪ್ರಬಂಧ, ಭಾಷಣ ಮತ್ತು ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು