LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ನೋಟಿಸ್‌ ನೀಡಿದೆ.

ಅನುಮತಿ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಹಿಂದಿನ ಬಿಜೆಪಿ ಸರ್ಕಾರ, ಡಿಕೆ ಶಿವಕುಮಾರ್‌ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿತ್ತು.

ಡಿಕೆ ಶಿವಕುಮಾರ್ ವಿರುದ್ಧ ತನಿಖೆ ಪುನರಾರಂಭಿಸುವ ಸಂಬಂಧ ಸಿಬಿಐ ಇತ್ತೀಚೆಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ, ಡಿಕೆ ಶಿವಕುಮಾರ್‌ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್‌ ಜಾರಿ ಮಾಡಿದೆ.

ಶಿವಕುಮಾರ್ ಅವರು 2013 ಮತ್ತು 2018ರ ನಡುವೆ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಅವಧಿಯಲ್ಲಿ ಡಿಕೆಶಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. 2019ರ ಸೆಪ್ಟೆಂಬರ್ 25 ರಂದು ಬಿಜೆಪಿ ಸರ್ಕಾರವು ವಿಚಾರಣೆ ನಡೆಸಲು ನೀಡದ ಅನುಮತಿಯ ಆಧಾರದ ಮೇಲೆ ಸಿಬಿಐ 2020 ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ (ಡಿಎ) ಕೇಸ್ ದಾಖಲಿಸಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು