LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಡಿಜಿಟಲ್ ಫ್ರಾಡ್, ಅರೆಸ್ಟ್ ಬಗ್ಗೆ ಜಾಗೃತಿ ಮೂಡಿಸಲು ಕ್ರಮ: ಪರಮೇಶ್ವರ್

ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸಾಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11,000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930ಗೆ ಮಾಹಿತಿ ನೀಡುವಂತೆ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು