LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿನ್ನರ್ ಮತ್ತೆ ಮಾಡುತ್ತೇವೆ: ಪರಮೇಶ್ವರ್

ಬೆಂಗಳೂರು: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್‍ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆ ನಡೆಸುತ್ತೇವೆ ಎಂದಿದ್ದಾರೆ.
ಪರಮೇಶ್ವರ್ ಅವರು ಎಸ್‍ಸಿ, ಎಸ್‍ಟಿ ಶಾಸಕರು, ಸಚಿವರ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲು ಮುಂದಾಗಿದ್ದರು.

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರು ಸಭೆ ಸೇರಿದ ವಿಚಾರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪರಮೇಶ್ವರ್ ಸಹ ಡಿನ್ನರ್ ಮೀಟಿಂಗ್ ನಡೆಸಲು ಮುಂದಾಗಿದ್ದರು. ಅತ್ತ ವಿದೇಶ ಪ್ರವಾಸದಿಂದ ದೆಹಲಿಗೆ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‍ಗೆ ಮಾಹಿತಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟ್‍ಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೈಕಮಾಂಡ್‍ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಬಗ್ಗೆ ನನಗೆ ಗೊತ್ತಿಲ್ಲ.

ನಮ್ಮ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್‍ರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದರು.ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದರು.ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಪರಮೇಶ್ವರ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು