LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಡಿ.ಕೆ.ಸುರೇಶ್‍ರವರ 59ನೇ ಹುಟ್ಟುಹಬ್ಬ ಪ್ರಯುಕ್ತ ಹಣ್ಣು-ಹಂಪಲು ವಿತರಣೆ

ರಾಮನಗರ : ರೈತರಿಗೆ ಕಲ್ಪವೃಕ್ಷ ಗಿಡ, ನಿರ್ಗತಿಕರಿಗೆ ಹೊದಿಕೆ, ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಣೆ ಮಾಡುವ ಮೂಲಕ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ 59ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಪಕ್ಷದ ಮುಖಂಡರು, ಅಭಿಮಾನಿಗಳು ಆಚರಣೆ ಮಾಡಿದರು.

ನಗರದ ಹಳೇ ಬಸ್ಸು ನಿಲ್ದಾಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ಸಮಿತಿ ವತಿಯಿಂದ ಡಿ.ಕೆ.ಸುರೇಶ್ ಅವರ 59ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಮುಖಂಡರು ಬೃಹತ್‍ಕೇಕ್ ಕತ್ತರಿಸುವ ಮೂಲಕ ಡಿ.ಕೆ.ಸುರೇಶ್ ಅವರಿಗೆ ಶುಭಕೋರಿದರು.ಈ ವೇಳೆ ಮಾಜಿ ಶಾಸಕ ಕೆ.ರಾಜು ಮಾತನಾಡಿ ಕ್ಷೇತ್ರದ ಅಭಿವೃದ್ದಿಯ ಹರಿಕಾರ ಹಾಗೂ ಕನ್ನಡ ನಾಡಿನ ಕಾವಲುಗಾರರಾಗಿರುವ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬವನ್ನು ಎಲ್ಲರೂ ಸೇರಿ ಆಚರಣೆ ಮಾಡಿ ಅವರಿಗೆ ಶುಭಾಷಯ ತಿಳಿಸುವ ಕೆಲಸ ಮಾಡುತ್ತಿದ್ದೇವೆ.

ಅವರು ಸಂಸದರಾಗಿದ್ದ ಸಮಯದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಯನ್ನು ಮರೆಯುವಂತಿಲ್ಲಾ, ಅಂತಹ ಬದ್ಧತೆಯಿರುವ ಡಿ.ಕೆ.ಸುರೇಶ್ ಅವರಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ರಾಜಕೀಯ ಸ್ಥಾನಮಾನಗಳು ಲಭಿಸಲಿ ಎಂದು ಶುಭ ಹಾರೈಸಿದರು.ಎಂಇಐ ಮಾಜಿ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಕೆ.ಶೇದ್ರಿ ಮಾತನಾಡಿ ವಿವಿದ ಕಾರಣಗಳಿಂದ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಅವರಿಗೆ ಸೋಲಾಗಿದೆ. ಆದರೆ ಅವರ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಗಳು ಪ್ರತಿ ಗ್ರಾಮಗ್ರಾಮಗಳಲ್ಲೂ ಮಾತನಾಡುತ್ತಿವೆ. ಆಗಾಗಿ ಅವರಿಗೆ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಸೇವೆ ಸಲ್ಲಿಸುವ ಅವಕಾಶ ಕರುಣಿಸಲಿ ಎಂದು ತಿಳಿಸಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್‍ಕುಮಾರ್ ಮಾತನಾಡಿ ನಮ್ಮ ನೆಚ್ಚಿನ ಜನಪ್ರಿಯ ನಾಯಕರಾದ ಡಿ.ಕೆ.ಸುರೇಶ್ ಅವರು ರೈತರ ಬದುಕು ಹಸಿರಾಗಿರಬೇಕೆಂಬ ಆಶಯ ಇಟ್ಟುಕೊಂಡಿರುವವರು. ಆಗಾಗಿ ಅವರ ಹುಟ್ಟು ಹಬ್ಬದಂದು ನಾಡಿನ ಅನ್ನದಾತನಾಗಿರುವ ರೈತರಿಗೆ ಹಸಿರಿನ ಸಮೃದ್ದಿಯ ಸಂಕೇತವಾಗಿರುವ ಸುಮಾರು 800ಕ್ಕೂ ಹೆಚ್ಚು ತೆಂಗಿನಸಸಿಗಳ ವಿತರಣೆ, ವಯೋವೃದ್ದ ಅಶಕ್ತರಿಗೆ ಬೆಡ್‍ಸೀಟ್ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮೂಲಕ ಆಚರಣೆ ಮಾಡಿದ್ದೇವೆ. ಡಿ.ಕೆ.ಸುರೇಶ್ ಅವರಿಗೆ ಆರೋಗ್ಯ, ಆಯಸ್ಸು ಮತ್ತು ಉನ್ನತ ರಾಜಕೀಯ ಸ್ಥಾನಮಾನಗಳು ಲಭಿಸಲಿ ಎಂದು ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಮತ್ತು ದರ್ಗಾದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರಾರ್ಥನೆ ಸಲ್ಲಿಸಿರುವುದಾಗಿ ಹೇಳಿದರು.

ಕೆಎಂಎಫ್ ಮಾಜಿ ಅಧ್ಯಕ್ಷ ಹಾಗೂ ಬಮೂಲ್ ನಿರ್ದೇಶಕ ಪಿ.ನಾಗರಾಜು ಮಾತನಾಡಿ ರಾಜ್ಯದಲ್ಲಿ ಯಾವ ಸಂಸದರು ಕೆಲಸ ಮಾಡಲಿಲ್ಲ ಅವರಿಗೆಲ್ಲ ಡಿ.ಕೆ.ಸುರೇಶ್ ಮಾದರಿ. ಜನಪ್ರತಿನಿಧಿಯಾಗಿ ಏನೆಲ್ಲ ಕೆಲಸ ಮಾಡಬಹುದು ಎಂಬುದನ್ನು ಮಾಡಿ ತೋರಿಸಿದ್ದಾರೆ ಎಂದು ಗುಣಗಾನ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅದ್ಯಕ್ಷ ಕೆ.ರಮೇಶ್, ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್‍ಆರ್ ವೆಂಕಟೇಶ್, ನಗರಸಭಾ ಮಾಜಿ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ದೀಪಾ ಮಾತನಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಗುರುಪ್ರಸಾದ್, ಕಾರ್ಯಾದ್ಯಕ್ಷ ಅನಿಲ್‍ಜೋಗೇಂದರ್, ಗ್ರಾಪಂ ಅಧ್ಯಕ್ಷರಾದ ಗಿರೀಶ್, ನವೀನ್ ಕಾಂಗ್ರೆಸ್‍ನ ಮುಖಂಡರಾದ ಜಯಣ್ಣ, ರಾಜಶೇಖರ್, ಪುಟ್ಟರಾಜು, ಮಾಯಗಾನಹಳ್ಳಿ ಎಂ.ಎಚ್.ರಂಜಿತ್, ಜಯಕರ್ನಾಟಕ ರವಿ, ವಸೀಂ, ಗುರುವೇಗೌಡ ಸೇರಿದಂತೆ ನಗರಸಭಾ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು