LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಿ.ಕೆ ಸುರೇಶ್ ಸಹೋದರಿಯೆಂದು ಹೇಳಿ ಮಹಿಳೆಯಿಂದ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು

ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್‌ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಮಳಿಗೆ ಮಾಲೀಕರಿಗೆ 8 ಕೋಟಿ ರೂಪಾಯಿಗಿಂತಲೂ ಅಧಿಕ ಮೊತ್ತದ ವಂಚನೆ ಮಾಡಿದ್ದಾರೆ. ಈ ಬಗ್ಗೆ ಚಂದ್ರಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಾದ ವನಿತಾ ಐತಾಳ್ ಎಂಬುವವರು ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ಧ ದೂರು ನೀಡಿದ್ದಾರೆ. ಐಶ್ವರ್ಯಾ ಜತೆ ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಐಶ್ವರ್ಯಾ ಗೌಡ 2023ರ ಅಕ್ಟೋಬರ್ ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಐಶ್ವರ್ಯಾ ಗೌಡ 8 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಖರೀದಿ ಮಾಡಿದ್ದಾರೆ. ಚಿನ್ನದ ಹಣ ಪಾವತಿಗೆ ಕೇಳಿದ ಸಂದರ್ಭದಲ್ಲಿ ಡಿ ಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದರಂತೆ. ಜತೆಗೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ವನಿತಾ ಐತಾಳ್ ತಿಳಿಸಿದ್ದಾರೆ.

ಐಶ್ವರ್ಯ ಗೌಡ ಅವರ ಪತಿ‌ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ ಕೆ ಸುರೇಶ್ ತಂಗಿ, ನನಗೆ ಅನೇಕ‌ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್​ ನಲ್ಲಿರುವ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು