LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಿ.31 ರಂದು ಎಂ.ಜಿ ರೋಡ್​ನಿಂದ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆ

ಬೆಂಗಳೂರು: 2025 ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದೆ. ಡಿಸೆಂಬರ್​ 31ರ ರಾತ್ರಿ ನಗರದ ಎಂಜಿ ರಸ್ತೆ, ಕೋರಮಂಗಲ, ಬ್ರಿಗೇಡ್​ ರೋಡ್​ಗಳಲ್ಲಿ ಹೊಸ ವರ್ಷಾಚರಣೆ ಜೋರಾಗಿರಲಿದೆ. ಈ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಮ್ಮ ಮೆಟ್ರೋ, ಬಿಎಂಟಿಸಿ ಬಳಸುವಂತೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಬೃಹತ್​ ಬೆಂಗಳೂರು ಮಹಾನಗರ ಸಾರಿಗೆ  ಎಂ.ಜಿ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚುವರಿ ಬಸ್ ಓಡಿಸಲಿದೆ.

ಬಿಎಂಟಿಸಿ ಒಟ್ಟು 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಈ ಬಸ್​ಗಳು ರಾತ್ರಿ 11 ಗಂಟೆಯಿಂದ ನಸುಕಿನ ಜಾವ 2 ಗಂಟೆಯವರೆಗೆ ಸಂಚರಿಸಲಿವೆ.

ಜೊತೆಗೆ ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್​ಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್​.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್​ಗಳಿಂದ ಪ್ರಯಾಣಿಕರ ದಟ್ಟಣೆ ಅನುನುಗುಣವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಕೊನೆಯ ರೈಲು ಜನವರಿ 1 ನಸುಕಿನ ಜಾವ 2 ಗಂಟೆಗೆ ಎಲ್ಲ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ಮೆಜೆಸ್ಟಿಕ್​ನಿಂದ ಕೊನೆಯ ರೈಲು ಎಲ್ಲ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡಲಿದೆ.

ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ. 50 ರೂಪಾಯಿ ಮೌಲ್ಯದ ಪೇಪರ್ ಟಿಕೆಟ್​ಗಳು ಮುಂಗಡವಾಗಿ ಲಭ್ಯವಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು