LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಿ.8ರಂದು ಎಸ್.ಪಿ.ಬಿ. ಸಂಗೀತ ಕಾರ್ಯಕ್ರಮ

ಸ್ವರ ಮಾಂತ್ರಿಕ, ಕನ್ನಡ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 50 ಸಾವಿರ ಹಾಡುಗಳನ್ನು ಹಾಡಿ ದೇಶದ ಜನರ ಹೃದಯದಲ್ಲಿ ಮನೆ ಮಾಡಿರುವ ಶ್ರೇಷ್ಠ ಗಾಯಕ ದಿ. ಎಸ್.ಪಿ. ಬಾಲಸುಬ್ರಮಣ್ಯಂ ಸ್ಮರಣಾರ್ಥ ತಮಿಳುನಾಡಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ನೆರವಾಗುವ ಸದುದ್ದೇಶದಿಂದ ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರೇಸ್ಟೀಜ್ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್ ನಲ್ಲಿ ಸಂಗೀತ ಕಾರ್ಯಕ್ರಮ ಜರುಗಲಿದೆ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕನ್ನಡದಲ್ಲಿ ಹಾಡಿರುವ ಕನ್ನಡ ಸಿನಿಮಾಗಳ ಜನಪ್ರಿಯ ಹಾಡುಗಳನ್ನು ಖ್ಯಾತ ಹಿನ್ನೆಲೆ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಎಸ್.ಪಿ. ಚರಣ್ ಹಾಡಲಿದ್ದಾರೆ. ಎಸ್.ಪಿ ಬಾಲಸುಬ್ರಮಣ್ಯಂ ಪುತ್ರ ಎಸ್.ಪಿ ಚರಣ್ ಈ ವಿಷಯ ತಿಳಿಸಿದರು.

ಎಸ್‍ಪಿ.ಬಿ ಅವರು ತಮ್ಮ 5 ದಶಕಗಳ ವೃತ್ತಿ ಜೀವನದಲ್ಲಿ ಹಾಡಿದ ಸಾವಿರಾರು ಹಾಡುಗಳು ಹರಿದಾಡುತ್ತಿವೆ. ಸಂಗೀತ ಲೋಕಕ್ಕೆ ಅವರು ನೀಡಿದ ಅಪಾರ ಕೊಡುಗೆಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು, ಗೌರವಗಳು ಅರಸಿ ಬಂದಿವೆ. ಆರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಪದ್ಮಶ್ರೀ ಹಾಗೂ ಪದ್ಮವಿಭೂಷಣ ಪ್ರಶಸ್ತಿಗಳು ಅವರ ಮುಡಿಗೇರಿವೆ.

ನಾಡಿನ ಈ ಮಹಾನ್ ಗಾಯಕನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ತಮಿಳುನಾಡಿನ ತಿರುವಳ್ಳುವರ್ ನಲ್ಲಿ ಸ್ಮಾರಕ ಮತ್ತು ಮ್ಯೂಸಿಯಂ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸ್ಮಾರಕವು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಂಗೀತ, ಗಾಯನ ಕ್ಷೇತ್ರದಲ್ಲಿ ನಡೆದು ಬಂದ ದಾರಿ, ನೀಡಿದ ಕೊಡುಗೆಗಳು, ಲಕ್ಷಾಂತರ ಗಾಯಕರಿಗೆ ನೀಡಿದ ಸ್ಪೂರ್ತಿಯ ವಿವರಗಳನ್ನು ಸ್ಮಾರಕದ ಮೂಲಕ ಮುಂದಿನ ತಲೆಮಾರಿಗೆಹಂಚಲಾಗುತ್ತದೆ.

ಕಲೆ, ಸಾಹಿತ್ಯ, ಸಂಸ್ಕೃತಿ, ಭಾಷೆಗಳನ್ನು ಉಳಿಸಿ, ಬೆಳೆಸಲು, ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಅವರು ನೀಡಿರುವ ಕೊಡುಗೆಯನ್ನು ಈ ಸ್ಮಾರಕ ಪಸರಿಸಲಿದೆ. ಅಲ್ಲದೇ, ಯುವ ಸಮುದಾಯಕ್ಕೆ ಸ್ಪೂರ್ತಿಯ ಸೆಲೆಯಾಗುತ್ತದೆ. ಡಿ.8ರಂದು ನಡೆಯುವ ಲೈವ್ ಕನ್ಸರ್ಟ್ ಕಾರ್ಯಕ್ರಮದಿಂದ ನಿಧಿಯನ್ನು ಸಂಗ್ರಹಿಸಿ ಅದನ್ನು ಸ್ಮಾರಕ, ಮ್ಯೂಸಿಯಂ ನಿರ್ಮಾಣಕ್ಕೆ ಬಳಸಲು ಉದ್ದೇಶಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು