LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮಕ್ಕೆ ನಿರ್ದೇಶನ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.

ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ ಹಾಟ್ ಸ್ಪಾಟ್ ಸ್ಥಳಗಳಲ್ಲಿ ನಾಗರೀಕರಿಗೆ ಸೊಳ್ಳೆ ಕಚ್ಚದಂತೆ ಡೀಟ್ ಕ್ರೀಮ್ ಹಾಗೂ ನೀಮ್ ಆಯಿಲ್ ವಿತರಿಸಬೇಕು. ಜೊತೆಗೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಹೆಚ್ಚಾಗಿ ಫಾಂಗಿಂಗ್ ಹಾಗೂ ಔಷಧಿ ಸಿಂಪಡಣೆ ಮಾಡಬೇಕೆಂದು ಸೂಚಿಸಿದರು.

ಆಯಾ ವಲಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಎಷ್ಟು ದರ ವಿಧಿಸುತ್ತಿದ್ದಾರೆ, ಎಷ್ಟು ಪ್ರಕರಣಗಳು ಕಂಡುಬರುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಸರ್ಕಾರಿ ಆದೇಶವನ್ನು ಉಲ್ಲಂಘಿಸಿ ಹೆಚ್ಚು ದರ ವಿಧಿಸುವ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಬೇಕು. ಜೊತೆಗೆ ನಗರದಲ್ಲಿ ಪರಿಣಾಮಕಾರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಅಭಿವೃದ್ಧಿಪಡಿಸುತ್ತಿರುವ ತಂತ್ರಾಂಶವನ್ನು ಸಿದ್ದಪಡಿಸಲಾಗುತ್ತಿದ್ದು, ಅದನ್ನು ಅನಾವರಣಗೊಳಿಸಲು ಸಿದ್ದತೆ ಮಾಡಿಕೊಳ್ಳಲು ಸೂಚಿಸಲಾಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಮಾಡಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಿ ಆದಷ್ಟು ಬೇಗ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ವಿಚಾರದಲ್ಲಿ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಪರಿಣಾಮಕಾರಿಯಾಗಿ ಕಾರ್ಯರ್ನಿಹಿಸಿ ಹೆಚ್ಚು ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಒಂದು ಬಾರಿ ತೀರುವಳಿ ಯೋಜನೆಯಡಿ ಬರುವ ಬಾಕಿ ಆಸ್ತಿ ಸುಸ್ತಿದಾರರಿಗೆ ಕೂಡಲೆ ತೆರಿಗೆ ಪಾವತಿಸಲು ಸೂಚಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಿಕೊಳ್ಳಬೇಕೆಂದು ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು