LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಡೊನಾಲ್ಡ್ ಟ್ರಂಪ್ ಗೆಲುವು, ದಾಖಲೆ ಮಟ್ಟಕ್ಕೆ Bitcoin ಬೆಲೆ ಏರಿಕೆ

ಲಂಡನ್: ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ರಾಜಕೀಯವಾಗಿ ಬದಲಾವಣೆಗಳಾದಾಗ ಅದು ಬೇರೆ ದೇಶಗಳ ಮೇಲೆ ಆರ್ಥಿಕವಾಗಿ, ದ್ವಿಪಕ್ಷೀಯ ಪರಿಣಾಮಗಳು ಬೀರುತ್ತವೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಟ್ರಂಪ್ ಅವರ ಗೆಲುವು ಕ್ರಿಪ್ಟೋಕರೆನ್ಸಿಗಳಿಗೆ ವರದಾನವಾಗಲಿದೆ ಎಂದು ಹೂಡಿಕೆದಾರರು ಪಣತೊಟ್ಟಿದ್ದರಿಂದ ಬಿಟ್‌ಕಾಯಿನ್ ಬೆಲೆ ನಿನ್ನೆ ಬುಧವಾರ ಹೊಸ ಗರಿಷ್ಠ ಮಟ್ಟವನ್ನು ತಲುಪಿತು.

ಆರಂಭಿಕ ವಹಿವಾಟಿನಲ್ಲಿ ಬಿಟ್‌ಕಾಯಿನ್ ಸುಮಾರು ಶೇಕಡಾ 8ರಷ್ಟು ಜಿಗಿದು 75,000 ಡಾಲರ್ ಗಿಂತ ಮೇಲಕ್ಕೆ ಏರಿಕೆಯಾಗಿದೆ. ಕಳೆದ ಬಾರಿ ಮಾರ್ಚ್‌ನಲ್ಲಿ ಮಾಡಿದ್ದ ದಾಖಲೆಯನ್ನು ಮುರಿದಿದೆ. ಬಿಟ್‌ಕಾಯಿನ್ ನಂತರ ವಿಶ್ವದ ಎರಡನೇ ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿಯಾದ ಈಥರ್ ಸೇರಿದಂತೆ ಇತರ ಕ್ರಿಪ್ಟೊಕರೆನ್ಸಿಗಳ ಬೆಲೆ ಶೇಕಡಾ 8ರಷ್ಟು ಏರಿಕೆಯಾಗಿದೆ.

ಮತ್ತೊಂದು ಟೋಕನ್, ಡಾಗ್‌ಕಾಯಿನ್ ಶೇಕಡಾ 18ರಷ್ಟು ಏರಿಕೆಯಾಗಿದೆ. ಇದು ಟ್ರಂಪ್‌ರ ಪ್ರಮುಖ ಬೆಂಬಲಿಗರಲ್ಲಿ ಒಬ್ಬರಾದ ಬಿಲಿಯನೇರ್ ಎಲೋನ್ ಮಸ್ಕ್ ಅವರ ನೆಚ್ಚಿನ ಕ್ರಿಪ್ಟೋಕರೆನ್ಸಿಯಾಗಿದೆ. ಟ್ರಂಪ್ ಈ ಹಿಂದೆ ಕ್ರಿಪ್ಟೋ ಕರೆನ್ಸಿ ವ್ಯವಹಾರವನ್ನು ನಂಬುತ್ತಿರಲಿಲ್ಲ. ಆದರೆ ಈಗ ಮನಸ್ಸು ಬದಲಿಸಿ ಚುನಾವಣೆಗೆ ಮುಂಚಿತವಾಗಿ ಕ್ರಿಪ್ಟೋಕರೆನ್ಸಿಗಳನ್ನು ಒಪ್ಪಿಕೊಂಡಿದ್ದಾರೆ.

ಅವರು ಅಮೆರಿಕವನ್ನು "ಭೂಮಿ ಮೇಲಿನ ಕ್ರಿಪ್ಟೋ ರಾಜಧಾನಿ" ಮಾಡಲು ಮತ್ತು ಬಿಟ್‌ಕಾಯಿನ್‌ನ "ಕಾರ್ಯತಂತ್ರದ ಮೀಸಲು" ದೇಶವನ್ನಾಗಿ ರಚಿಸುವುದಾಗಿ ವಾಗ್ದಾನ ಮಾಡಿದ್ದಾರೆ. ವರ್ಲ್ಡ್ ಲಿಬರ್ಟಿ ಫೈನಾನ್ಷಿಯಲ್ ನ್ನು ಪ್ರಾರಂಭಿಸಿ ಇದು ಕ್ರಿಪ್ಟೋ ಕರೆನ್ಸಿಗಳನ್ನು ವ್ಯಾಪಾರ ಮಾಡಲು ಹೊಸ ಉದ್ಯಮವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು