LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಿ.24ಕ್ಕೆ ಡಾಲಿ ಧನಂಜಯ ಸಿನಿಮಾ ರಿಲೀಸ್!


ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ `ಡಾಲಿ’ ಧನಂಜಯ ಅಭಿನಯದ ಬಹುನಿರೀಕ್ಷಿತ `ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ನೂತನ `ಪುಟ್ಟಮಲ್ಲಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿರುವ ಈ ಹಾಡು ಸದ್ಯ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹವಾ ಮಾಡುತ್ತಿದೆ. ರೆಟ್ರೋ ಶೈಲಿ ಹಾಗೂ ಆಧುನಿಕ ಟ್ರೆಂಡ್‌ಗಳ ಅದ್ಭುತ ಸಮ್ಮಿಲನವಾಗಿರುವ ಈ ಗೀತೆ ಇನ್‌ಸ್ಟಾಗ್ರಾಮ್ ರೀಲ್ಸ್, ಯೂಟ್ಯೂಬ್ ಶಾರ್ಟ್ಸ  ಹಾಗೂ ಎಕ್ಸ್ (ಟ್ವಿಟರ್) ತಾಣಗಳಲ್ಲಿ #Puttamalli ಮತ್ತು #AnnaFromMexico ಹ್ಯಾಶ್‌ಟ್ಯಾಗ್‌ಗಳೊಂದಿಗೆ ಸಿಕ್ಕಾಪಟ್ಟೆ ಟ್ರೆಂಡ್ ಆಗುತ್ತಿದೆ.ವಾಸೂಕಿ ವೈಭವ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸುಮಧುರ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದು, ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ಹಾಡು ಅತ್ಯಂತ ಆಕರ್ಷಕವಾಗಿ ಹೊರಹೊಮ್ಮಿದೆ. ಕೇಳುಗರನ್ನು ತಕ್ಷಣವೇ ಗುಂಗಿಗೆ ಕೆಡವುವ ಈ ಟ್ರ್ಯಾಕ್‌ಗೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಗೀತೆಯು ಚಿತ್ರಕ್ಕೆ ದೊಡ್ಡ ಮಟ್ಟದ ಮೈಲೇಜ್ ತಂದುಕೊಟ್ಟಿದೆ.ಶಂಕರ್ ಗುರು ನಿರ್ದೇಶನದ `ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರವು ಸಾಹಸ, ಹಾಸ್ಯ ಹಾಗೂ ಸಂಪೂರ್ಣ ಕೌಟುಂಬಿಕ ಮನರಂಜನೆಯ ಅಂಶಗಳನ್ನು ಒಳಗೊಂಡಿದೆ. ಕ್ರಿಸ್‌ಮಸ್ ಪ್ರಯುಕ್ತ ಡಿಸೆಂಬರ್ 24ರಂದು ಚಿತ್ರವನ್ನು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ಈ ಹಾಡಿನ ಮೂಲಕ ಸದ್ದು ಮಾಡಿರುವ ಚಿತ್ರತಂಡ, ಬಿಡುಗಡೆ ಹತ್ತಿರವಾಗುತ್ತಿದ್ದಂತೆ ಚಿತ್ರದ ಮಾಸ್ ಬೀಟ್‌ಗಳ ಹಾಡುಗಳನ್ನು ಹೊರತರಲು ಸಿದ್ಧತೆ ನಡೆಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST