LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ತಕ್ಷಣ ಅಬಕಾರಿ ಸಚಿವರ ರಾಜೀನಾಮೆ ಪಡೆದು, ತನಿಖೆಗೆ ಆದೇಶಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಡಾ.ಮುಖ್ಯಮಂತ್ರಿ ಚಂದ್ರು ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಮುಖ್ಯಮಂತ್ರಿ ಚಂದ್ರು, ಅಬಕಾರಿ ಇಲಾಖೆಯಲ್ಲಿ ಅವ್ಯವಹಾರ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಬಿಜೆಪಿ ಅವಧಿಯಲ್ಲೂ ಅಬಕಾರಿ ಇಲಾಖೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಅಬಕಾರಿ ಇಲಾಖೆಯಲ್ಲಿ ಈವರೆಗೆ ಸುಮಾರು ೯೦೦ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳು ಕೇಳಿ ಬಂದಿದೆ. ಸಚಿವರಿಗೆ ಪ್ರತಿ ತಿಂಗಳು ಮಾಮೂಲಿ ಕೊಡಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳೇ ಮದ್ಯದಂಗಡಿಗಳಲ್ಲಿ ಹಫ್ತಾ ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಮದ್ಯ ಮಾರಾಟಗಾರರ ಸಂಘವೇ ಸಚಿವರ ವಿರುದ್ಧ ಆರೋಪ ಮಾಡಿದೆ ಎಂದರೆ, ಇಲ್ಲಿ ಭ್ರಷ್ಟಾಚಾರ ಮಿತಿಮೀರಿರುವುದು ಸ್ಪಷ್ಟವಾಗಿದೆ ಕೂಡಲೇ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಕೂಡಲೇ ಸಚಿವ ತಿಮ್ಮಾಪುರ ಅವರನ್ನು ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ತನಿಖೆಗೆ ಆದೇಶ ಕೊಡಬೇಕು. ಈ ವಿಚಾರದಲ್ಲಿ ನೀವು ಮೌನವಾಗಿದ್ದರೆ ಈ ಭ್ರಷ್ಟಾಚಾರಕ್ಕೆ ನಿಮ್ಮ ಒಪ್ಪಿಗೆ ಕೂಡ ಇದೆ ಎನ್ನುವ ಕೆಟ್ಟ ಸಂದೇಶ ರವಾನಿಸದಂತಾಗುತ್ತದೆ. ಈ ಕೂಡಲೇ ಕ್ರಮ ತೆಗೆದುಕೊಂಡು ತಾವು ಭ್ರಷ್ಟಾಚಾರವನ್ನು ಸಹಿಸಲ್ಲ ಎನ್ನುವ ಸಂದೇಶ ಕೊಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಮೊಟ್ಟೆ ಹಂಚಿಕೆ ಅಕ್ರಮ ತನಿಖೆ ಮಾಡಿ: ಉದ್ಯಮಿ ಅಜೀಂ ಪ್ರೇಮ್‌ಜೀ ಫೌಂಡೇಷನ್ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮಕ್ಕಳಿಗೆ ವಾರದಲ್ಲಿ ೬ ದಿನ ಮೊಟ್ಟೆ ನೀಡುವ ಯೋಜನೆಗೆ ೧,೫೦೦ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ, ಆದರೆ ಮೌಲ್ಯಮಾಪನ ಅಧ್ಯಯನ ವರದಿಯಲ್ಲಿ ಮಕ್ಕಳಿಗೆ ಮೊಟ್ಟೆಯನ್ನೇ ಕೊಡುತ್ತಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಹೀಗೆ ದಾನಿಗಳು ಕೊಡುವ ಹಣದಲ್ಲೂ ಭ್ರಷ್ಟಾಚಾರ ಮಾಡಿದರೆ ಮುಂದಿನ ದಿನಗಳಲ್ಲಿ ದಾನ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ಸರ್ಕಾರ ಇದ್ದಾಗ ಮೊಟ್ಟೆ ಪೂರೈಕೆಯಲ್ಲಿ ಕಮಿಷನ್ ಪಡೆದ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಅವಧಿಯಲ್ಲಿ ಮೊಟ್ಟೆಯನ್ನೇ ಕೊಡದೆ ವಂಚನೆ ಮಾಡಲಾಗುತ್ತಿದೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ನೀವುಗಳು ಈಗ ಮಾಡುತ್ತಿರುವುದು ಏನು ಎಂದು ನಿಮ್ಮನ್ನು ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ. ಕೂಡಲೇ ಸಂಬAಧಪಟ್ಟ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಗ್ರಾಮೀಣ, ಬಡ ಮಕ್ಕಳಿಗೆ ಮೊಟ್ಟೆ ವಿತರಿಸಲು ಕ್ರಮ ತೆಗೆದುಕೊಳ್ಳಿ ಎಂದು ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು