LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ತರಬೇತಿ ಪಡೆದ ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ಪ್ರಮಾಣ ಪತ್ರ ವಿತರಣೆ

ಚಿಕ್ಕಬಳ್ಳಾಪುರ: ತರಬೇತಿ ಪಡೆದ ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ಇಂದು ನಗರಸಭೆಯಲ್ಲಿ ತರಬೇತಿ ಪ್ರಮಾಣ ಪತ್ರಗಳನ್ನು ನಗರಸಭೆ ಅಧ್ಯಕ್ಷ ಗಜೇಂದ್ರ ಮತ್ತು ಉಪಾಧ್ಯಕ್ಷ ನಾಗರಾಜ್ ಜೆ ವಿತರಿಸಿದರು.ಚಿಕ್ಕಬಳ್ಳಾಪುರ ನಗರದ ಬೀದಿ ಬದಿಯಲ್ಲಿ ಅನೇಕ ಮಂದಿ ವಿವಿಧ ಆಹಾರ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಇಡ್ಲಿ, ದೋಸೆ, ಕಬಾಬ್, ಪಾನಿಪೂರಿ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ತಳ್ಳುವ ಗಾಡಿಗಳ ಮೂಲಕ ನಗರದ ಪ್ರಮುಖ ರಸ್ತೆಗಳ ಪಕ್ಕದಲ್ಲಿ ಇಟ್ಟಿಕೊಂಡು ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ವ್ಯಾಪಾರಿಗಳಿಗೆ ಈ ಹಿಂದೆಯೇ ತರಬೇತಿ ನೀಡಲಾಗಿತ್ತು.ತರಬೇತಿಯಲ್ಲಿ ಭಾಗವಹಸಿದ್ದ ಸುಮಾರು 50ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ನಗರಸಭೆಯಲ್ಲಿ ಇಂದು ಪ್ರಮಾಣ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷ ಗಜೇಂದ್ರ, ವ್ಯಾಪಾರಿಗಳು ಆಹಾರ ಸುರಕ್ಷತೆ ಬಗ್ಗೆ ತರಬೇತಿಯನ್ನು ಈಗಾಗಲೇ ಪಡೆದಿದ್ದು, ಅವರೆಲ್ಲರೂ ಸುರಕ್ಷತಾ ನಿಯಮಗಳನ್ನು ಪಾಲಿಸಿ, ವ್ಯಾಪಾರ ವಹಿವಾಟು ನಡೆಸುವಂತೆ ಕೋರಿದರು.ನಗರಸಭೆ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ತಮ್ಮ ಜೀವನೋಪಾಯಕ್ಕಾಗಿ ಆಹಾರದ ಉತ್ಪನ್ನಗಳನ್ನು ಮಾರಾಟ ಮಾಡಿ, ಜೀವನ ನಡಸುತ್ತಿದ್ದು,

ಆಹಾರ ಸೇವನೆ ಮಾಡುವ ಗ್ರಾಹಕರ ಆರೋಗ್ಯವನ್ನೂ ದೃಷ್ಟಿಯಲ್ಲಿ ಇಟ್ಟಿಕೊಂಡು ವಹಿವಾಟು ನಡೆಸುವಂತೆ ಕೋರಿದರು. ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ಈ ವಿಚಾರದಲ್ಲಿ ಅಪಾಯಕಾರಿ ರಾಸಾಯನಿಕ ಬಳಕೆ ಸೇರಿದಂತೆ ಇತರೆ ಕಳಪೆ ಮಾಡದೆ ಸುರಕ್ಷಿತವಾದ ಮತ್ತು ಆರೋಗ್ಯಕರವಾದ ಆಹಾರ ನೀಡುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಯತೀಶ್ ಹನುಮಂತಪ್ಪ ಮುಖಂಡ ಸಂತೋಷ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು