LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧ

ಬೆಂಗಳೂರು: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ. ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಶಾಂತಿ ಮಂತ್ರ ಪಠಿಸಿದ್ದರು. ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗತಿಗೆ ನಿರ್ಧರಿಸಿದ್ದಾರೆ. ಅಂತೆಯೇ ಇಂದು (ಜನವರಿ 08) ಸಂಜೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗಲು ನಿರ್ಧರಿಸಿದ್ದಾರೆ.

ಶೃಂಗೇರಿ ತಾಲೂಕಿನ ಲತಾ ಮಂಡಗಾರು ಬಡ ಆದಿವಾಸಿ ದಂಪತಿಯ ದೊಡ್ಡ ಕುಟುಂಬದ ಹೆಣ್ಣುಮಗಳು ಬಡತನ ಹಾಗೂ ಶಾಲೆಯ ಮಾಸ್ತರರ ಕಿರುಕುಳಗಳಿಂದಾಗಿ 6ನೆಯ ತರಗತಿಗೆ ಓದು ನಿಲ್ಲಿಸಿದರು. ಅಂತ್ಯದ ನೂರಾರು ಆದಿವಾಸಿ ಕುಟುಂಬಗಳಂತೆಯೇ ಈ ಕುಟುಂಬವು ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಡಿ ಮನೆ ಕಳೆದುಕೊಳ್ಳುವ ಪರಿಸ್ಥಿತಿ ಬಂದಾಗ ಅದರ ವಿರುದ್ಧದ ಹೋರಾಟ ನಡೆಸುತ್ತಿದ್ದ ಚಳವಳಿಯ ಭಾಗವಾದರು. ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಬೆಲೆ ನೀಡದ ಸರ್ಕಾರದ ಧೋರಣೆಗೆ ಬೇಸತ್ತು 2000ರಲ್ಲಿ 18ನೇ ವಯಸ್ಸಿನಲ್ಲಿ ಸಶಸ್ತ್ರ ಹೋರಾಟಕ್ಕೆ ಧುಮುಕಿ ಅಂದಿನಿಂದ ಕರ್ನಾಟಕ ಹಾಗೂ ಕೇರಳಗಳಲ್ಲಿ ಸಂಚರಿಸುವ ದಳದ ಭಾಗವಾಗಿದ್ದು, ಇಂದು ಮತ್ತೆ ಜನಪದ ಚಳವಳಿಗಳಲ್ಲಿ ಪ್ರಜಾತಂತ್ರವಾಗಿ ಹೋರಾಟಗಳನ್ನು ನಡೆಸಲು ಮುಖ್ಯವಾಹಿನಿಯ ಭಾಗವಾಗುತ್ತಿದ್ದಾರೆ. ಕೇವಲ 6ನೇ ತರಗತಿಯವರೆಗೆ ಓದಿರುವ ಲತಾರವರು ಯೋಜನೆಗಳ ಸ್ಪಷ್ಟತೆ ಹಾಗೂ ಬದ್ಧತೆ ಬೆರಗು ಹುಟ್ಟಿಸುವಂಥದ್ದು. ಈಗಿನ ನಕ್ಸಲ್ ತಂಡದ ನಾಯಕಿ ಎಂದು ಹೇಳಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು