LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ತಿ.ನರಸೀಪುರ ತಾಪಂ ಸಭಾಂಗಣದಲ್ಲ್ಲಿ ಗ್ಯಾರಂಟಿ ಸಮಿತಿ ಸಭೆ

ತಿ.ನರಸೀಪುರ: ಶಕ್ತಿ ಯೋಜನೆ ರಾಜ್ಯದಲ್ಲಿ ತುಂಬಾ ಉತ್ತಮ ಯೋಜನೆಯಾಗಿದೆ. ಆದರೆ, ಎಷ್ಟೋ ಕಡೆಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗಿದೆ ಎಂದು ಗ್ಯಾರೆಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಮಹಾದೇವಪ್ರಭು ಬೇಸರ ವ್ಯಕ್ತಪಡಿಸಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಾದೇವ ಪ್ರಭು ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಪಂಚ ಗ್ಯಾರಂಟಿಯ ಉಪಯೋಗ ಮತ್ತು ತೊಂದರೆಗಳ ಬಗ್ಗೆ ಐದು ಗ್ಯಾರಂಟಿಗಳ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಶಕ್ತಿ ಯೋಜನೆಯಿಂದ ಇಲಾಖೆಗೆ ಅನುಕೂಲ ವಾಗಿರಬಹುದು ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ. ತಿ.ನರಸೀಪುರ ದಿಂದ ತಲಕಾಡು ಮತ್ತು ಕಲಿಯೂರು ಮುಳ್ಳೂರು ಮಾರ್ಗ ಕೊಳ್ಳೇಗಾಲಕ್ಕೆ ಬಸ್ ವ್ಯವಸ್ಥೆ ಇರುವುದಿಲ್ಲ ಹಾಗಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಿ ಬರಲು ತುಂಬಾ ತೊಂದರೆ ಉಂಟಾಗಿದೆ ಎಂದು ಪರಶಿವಮೂರ್ತಿ ಹೇಳಿದರು.
ಗೃಹಲಕ್ಷ್ಮಿಯಲ್ಲಿ 513 ಜನ ಫಲಾನುಭವಿಗಳು, ಗೃಹ ಜ್ಯೋತಿಯಲ್ಲಿ 479 ಯುವ ನಿಧಿಯಲ್ಲಿ 80 ಜನ ಫಲಾನುಭವಿಗಳು ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದಾರೆ ಮುಂದಿನ ಸಭೆಯಲ್ಲಿ ವಂಚಿತರಾಗಿರುವ ಎಲ್ಲಾ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳು ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಸರ್ಕಾರ ಸರ್ಕಾರದ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು ಅಧಿಕಾರಿಗಳಿಗೆ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಹಾದೇವ ಪ್ರಭು ತಾಕಿತು ಮಾಡಿದರು.

ಶಕ್ತಿ ಯೋಜನೆಯಿಂದ ಫಲಾನುಭವಿಗಳು ತುಂಬಾ ಉಪಯೋಗ ಪಡೆದುಕೊಂಡಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಸಮರ್ಪವಾಗಿ ಬಸ್ಸು ಬರುತ್ತಿಲ್ಲ ಮತ್ತು ವಿದ್ಯಾರ್ಥಿಗಳಿಗೆ ಬಸು ನಿಲ್ಲಿಸುವುದಿಲ್ಲ ಮತ್ತು ಟಿಕೆಟ್ ಅನ್ನು ಬೇಕಾಬಿಟ್ಟಿ ಎಂದು ಸಾರ್ವಜನಿಕ ವಲಯದಲ್ಲಿ ಬರುತ್ತಿದೆ ಸಮರ್ಪಕ್ಕಾಗಿ ಕರ್ತವ್ಯ ನಿರ್ವಹಿಸಿ ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನ್ನಭಾಗ್ಯ ಯೋಜನೆ ಬಗ್ಗೆ ನ್ಯಾಯ ಬೆಲೆ ಅಂಗಡಿಯಲ್ಲಿ. ವಿತರಿಸುವ ವೇಳೆಯನ್ನು ಪ್ರಕಟಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಕೇತಹಳ್ಳಿ ಸಿದ್ದಶೆಟ್ಟಿ, ಮಂಜು, ಕುಪ್ಯಗ್ರಾ.ಪಂ ಅಧ್ಯಕ್ಷ ಗವಿಸಿದ್ದಯ್ಯ, ಪರಶಿವ,ಸಲೀಮ್, ಮಹಮದ್ ಸಲ್ಮಾನ್,ತಾಲೂಕು ಪಂಚಾಯತಿ ಇ.ಓ ಅನಂತರಾಜು, ತಾಲೂಕು ಪಂಚಾಯತಿ ಯೋಜನಾಧಿಕಾರಿ ರಂಗಸ್ವಾಮಿ, ಚೆಸ್ಕಾಂ ಎಇಇ ವೀರೇಶ್, ಸಿ.ಡಿ.ಪಿ.ಓ ಗೋವಿಂದರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು