LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತೆರಿಗೆ ಶ್ವೇತ ಪತ್ರ ಹೊರಡಿಸಿ ರಾಜ್ಯಕ್ಕೆ ತಾರತಮ್ಯವಾಗಿಲ್ಲ ಎಂದ ಕೇಂದ್ರ ಸಚಿವ ವಿ.ಸೋಮಣ್ಣ

ದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನಲ್ಲಿ ಯಾವುದೇ ರೀತಿಯಲ್ಲಿ ತಾರತಮ್ಯವಾಗಿಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆಯಲ್ಲಿ ತಾರತಮ್ಯವಾಗಿಲ್ಲ. ಈ ಬಗ್ಗೆ ರಾಜ್ಯಸರ್ಕಾರ ಸಮಗ್ರವಾದ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಪಡಿಸಿದ್ದಾರೆ.

ರಾಜ್ಯದಲ್ಲಿ ರೈಲ್ವೇ ಯೋಜನೆಯಲ್ಲಿ ನೆನೆಗುದಿಗೆ ಬಿದ್ದಿದ್ದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ರಸ್ತೆ ಮತ್ತು ಮೂಲಭೂತ ಸೌಕರ್ಯ ರಾಜ್ಯದಲ್ಲಿ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.ವಿನಾಕಾರಣ ಕೇಂದ್ರವನ್ನು ದೂರುವುದರಲ್ಲಿ ಅರ್ಥವಿಲ್ಲ ಎಂದಿರುವ ಅವರು, ರಾಜ್ಯ ಸರ್ಕಾರದ ಆರೋಪವನ್ನು ಅಲ್ಲಗೆಳೆದಿದ್ದಾರೆ.

ನಮಗೆ ಗೆಲುವು: ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.ಮೂರು ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿ ಮೂರು ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಾಗುವುದು ಎಂದಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಯಾವುದೇ ವಯಕ್ತಿಕ ಪ್ರಕರಣ ದಾಖಲಾಗಿಲ್ಲ. ಕಾರ್ಯಕರ್ತರು ಜತೆ ಸೇರಿ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲೇ ಪ್ರಕರಣ ವಾಪಸ್ ಪಡೆಯಲು ಸಿದ್ಧತೆ ನಡೆದಿತ್ತು. ಇದೀಗ ಪ್ರಕರಣ ವಾಪಸ್ ಪಡೆಯಲಾಗಿದೆ. ಪ್ರಕರಣ ವಾಪಸ್‍ಗೆ ನಾನು ಯಾವುದೇ ಅರ್ಜಿ ನೀಡಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಪಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು