LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ತ್ರಿಬಾಣಧಾರಿ ಬಾರ್ಬರಿಕ' ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆAಟ್ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, `ತ್ರಿಬಾಣಧಾರಿ ಬಾರ್ಬರಿಕ' ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ಮಾರುತಿ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಪ್ರತಿಭಾವಂತ ಕಲಾವಿದರ ಮತ್ತು ತಂತ್ರಜ್ಞರ ದಂಡೇ ಈ ಚಿತ್ರದಲ್ಲಿದೆ. ಕನ್ನಡಿಗ ವಸಿಷ್ಠ ಸಿಂಹ ಸಹ ಈ ಪ್ಯಾನ್ ಇಂಡಿಯಾ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಇತ್ತೀಚೆಗೆ `ತ್ರಿಬಾಣಧಾರಿ ಬಾರ್ಬ ರಿಕ' ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ದ್ದು, ಇದರ ಮೂಲಕ ಚಿತ್ರದ ಕಥಾವಸ್ತುವನ್ನು ಪರಿಚಯಿಸಲಾಗಿದೆ. ಪೌರಾಣಿಕ ಮತ್ತು ಸಾಮಾಜಿಕ ಅಂಶಗಳು ಬೆರೆತಿರುವ ಕಥೆ ಇದಾ ಗಿದೆ. ಭೀಮನ ಮೊಮ್ಮಗ ಮತ್ತು ಘಟೋತ್ಕಚನ ಮಗ ಬಾರ್ಬರಿಕನ ಕಥೆ ಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಮೂರು ಬಾಣಗಳನ್ನು ಏಕಕಾಲಕ್ಕೆ ಹೂಡುವ ಬಾರ್ಬರಿಕನ ಅದ್ಭುತ ಪರಾಕ್ರಮವನ್ನು ಈ ಮೋಷನ್ ಪೋಸ್ಟರ್ ನಲ್ಲಿ ವಿವರಿಸಲಾಗಿದೆ.
ಈ ಜಗತ್ತು ಗಮನಿಸದ ಒಬ್ಬ ಮಹಾವೀರನ ಕಥೆ ಇದು ಎಂದು ಈ ಪೋಸ್ಟರ್ ನಲ್ಲಿ ಬಣ್ಣಿಸಲಾಗಿದೆ. ಒಂದು ಕಡೆ ಪೌರಾಣಿಕ ಕಥೆ ಹೇಳುತ್ತಲೇ, ಇನ್ನೊಂದು ಕಡೆ ಆಧುನಿಕ ಸ್ಪರ್ಶ ಸಹ ನೀಡಲಾಗಿದೆ. ಗಾಂಢೀವಧಾರಿ ಅರ್ಜುನ, ಪಾಶುಪತಾಸ್ತçಂ, ಬ್ರಹ್ಮಾಸ್ತçಂ, ಗರುಡ ಪುರಾಣಂ ಮುಂತಾದ ಪುಸ್ತಕಗಳ ಜೊತೆಗೆ ಗನ್ ಸಹ ತೋರಿಸಲಾಗಿದೆ. ಈ ಮೂಲಕ ಪೌರಾಣಿಕ ಮತ್ತು ಸಮಕಾಲೀನ ವಿಷಯಗಳನ್ನು ಈ ಚಿತ್ರದಲ್ಲಿ ಹೇಳಿರುವ ಸೂಚನೆ ನೀಡಲಾಗಿದೆ.
ಈ ಮೋಷನ್ ಪೋಸ್ಟರ್, ಚಿತ್ರದ ಬಗ್ಗೆ ನಿರ್ದೇಶಕರಿಗಿರುವ ಒಳನೋಟ ಮತ್ತು ಒಂದೊಳ್ಳೆಯ ಚಿತ್ರವನ್ನು ಪ್ರೇಕ್ಷಕರಿಗೆ ನೀಡ ಬೇಕೆಂಬ ನಿರ್ಮಾಪಕರನ್ನು ಬದ್ಧತೆಯನ್ನು ಎತ್ತಿಹಿಡಿಯುತ್ತಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇನ್ಫೂ÷್ಯಷನ್ ಬ್ಯಾಂಡ್ ಎಂಬ ಸಂಗೀತ ತಂಡವು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು