LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ದದ್ದಲ್, ನಾಗೇಂದ್ರಗೆ ಇ.ಡಿ. ಬಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಿನ್ನೆಲೆ ದಾಖಲೆ ಪತ್ರ ಪರಿಶೀಲನೆ

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಸಕರಾದ ಬಸವನಗೌಡ ದದ್ದಲ್ ಹಾಗೂ ಬಿ. ನಾಗೇಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ, ದಾಖಲೆಪತ್ರ ಪರಿಶೀಲನೆ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ನಿನ್ನೆಯಷ್ಟೇ ಬಸನಗೌಡ ದದ್ದಲ್ ಎಸ್‍ಐಟಿ ವಿಚಾರಣೆ ಎದುರಿಸಿದ್ದರು.

ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದೆ.ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಧಿಕಾರಿಗಳಿಂದ ಫ್ಲ್ಯಾಟ್‍ನಲ್ಲಿ ತನಿಖೆ ನಡೆಸಲಾಗುತ್ತಿದೆ.ಬೆಂಗಳೂರಿನಲ್ಲಿ ನಾಗೇಂದ್ರ, ಬಸವರಾಜ್ ದದ್ದಲ್, ಸುಚಿ ಸ್ಮಿತಾ, ದೀಪಾ, ಕೃಷ್ಣಮೂರ್ತಿ ಇವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆದಿದೆ.ನಾಗೇಂದ್ರ ಅವರ ಆಪ್ತರು ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾ ದವರ ಮನೆ ಮೇಲೂ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರು ರಾಯಚೂರು, ಹೈದರಾಬಾದ್ ಸೇರಿದಂತೆ ಒಟ್ಟು 18 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು