LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದರ್ಶನ್ ಪತ್ನಿಯಿಂದ ಡಿಕೆ ಭೇಟಿ ಕಾನೂನಿನಡಿ ಪತಿಗೆ ಸಹಾಯ ಮಾಡಲು ಮನವಿ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ೨ನೇ ಆರೋಪಿ ಆಗಿ ಜೈಲು ಸೇರಿರುವ ಚಿತ್ರನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇಂದುಬೆಳಿಗ್ಗೆ ಮೈದುನ ದಿನಕರ್ ಜೊತೆ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಅವರಿಬ್ಬರು ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಸ್ವಲ್ಪ ಹೊತ್ತಿಗೆ ನಿರ್ದೇಶಕ ಪ್ರೇಮ್ ಕೂಡ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ್ದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಭೇಟಿ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಕಾನೂನು ವ್ಯಾಪ್ತಿಯಲ್ಲಿ ತಮ್ಮ ಪತಿಗೆ ಸಹಾಯ ಮಾಡುವಂತೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.ದರ್ಶನ್ ನ್ಯಾಯಾಂಗ ಕಸ್ಟಡಿಯನ್ನು ನ್ಯಾಯಾಲಯವು ಆ.೧ರವರೆಗೆ ವಿಸ್ತರಿಸಿದೆ.ಅವರೊಂದಿಗೆ ನಗರದ ಕೇಂದ್ರೀಯ ಕಾರಾಗೃಹದಲ್ಲಿರುವ ಇತರ ೧೨ ಆರೋಪಿಗಳ ನ್ಯಾಯಾಗ ಕಸ್ಟಡಿಯನ್ನು ಸಹ ಅದೇ ತಾರೀಖಿನವರೆಗೆ ವಿಸ್ತರಿಸಲಾಗಿದೆ.

ನಿನ್ನೆ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿ ಭಾಷಣ ಮಾಡುತ್ತಿದ್ದ ವೇಳೆ ನಟ ದರ್ಶನ ಅಭಿಮಾನಿಗಳು ಡಿ ಬಾಸ್, ಡಿ ಬಾಸ್ ಎಂದು ಕೂಗಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರಯ, ನಟ ದರ್ಶನ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಬುಧವಾರ ಭೇಟಿಯಾಗಿ ಮಾತಾಡುವೆ ಎಂದು ಹೇಳಿದ್ದರು.

ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದಿದ್ದರು.ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿರುವಂತೆ ಇಂದು ವಿಜಯಲಕ್ಷ್ಮೀ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ್ದು ಭಾರಿ ಮಹತ್ವ ಪಡೆದುಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು