LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದರ ಪರಿಷ್ಕರಿಸಿ ಬಿಎಂಆರ್‍ಸಿಎಲ್ ಎಂಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ಮೆಟ್ರೋ ಪ್ರಯಾಣ ದರವನ್ನು ಏರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದನ್ನು ಮನಗಂಡಿರುವ ಸಿದ್ದರಾಮಯ್ಯ ಕೆಲ ಕಡೆ ಅಸಹಜ ರೀತಿಯಲ್ಲಿ ಏರಿಕೆಯಾಗಿರುವ ದರವನ್ನು ಇಳಿಸುವಂತೆ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಮೆಟ್ರೊ ರೈಲು ನಿಗಮ (ಬಿಎಂಆರ್‍ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದಿದ್ದಾರೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‍ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಟ್ವಿಟ್‍ನಲ್ಲಿ ವಿವರಿಸಿದ್ದಾರೆ.

ಬಿಎಂಆರ್‍ಸಿಎಲ್ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ನಮ್ಮ ಮೆಟ್ರೋ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.ದರ ಏರಿಕೆಯಿಂದಾಗಿ ಪ್ರತಿನಿತ್ಯ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಬಹುತೇಕ ಮಂದಿ ಮೆಟ್ರೋದತ್ತ ಸುಳಿಯುತ್ತಿಲ್ಲ. ಮೆಟ್ರೋಗೆ ನೀಡುವ ಹಣಕ್ಕಿಂತ ಆಟೋ, ಬೈಕ್ ಬೆಸ್ಟ್ ಎನ್ನುತ್ತಿದ್ದಾರೆ. ಹೀಗಾಗಿ ಟಿಕೆಟ್ ದರ ಏರಿಕೆಯಾದ ಬೆನ್ನಲ್ಲೇ ಮೆಟ್ರೋನಲ್ಲಿ ಪ್ರಯಾಣಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ, ಇದೀಗ ದರ ಏರಿಕೆಯಾದ ಮೇಲೆ ಪ್ರಯಾಣಿಕರ ಸಂಖ್ಯೆ 35% ರಿಂದ 40% ರಷ್ಟು ಕಡಿಮೆಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು